ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಮತ್ತು ವೃತ್ತಿಪರರ ಸಂಘದ ವತಿಯಿಂದ 2024ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಸೋಮಣ್ಣ ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ವಿವಿಧ ಕ್ಷೇತ್ರಗಳ ಸಾಧಕರು, ಬಡ್ತಿ ಹೊಂದಿದ ಮತ್ತು ನಿವೃತ್ತ ನೌಕರರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾರ್ಚ್ 9ರಂದು ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 8ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಜಾತಿ ದೃಢೀಕರಣ ಪತ್ರ, ಅಂಕಪಟ್ಟಿ ಜೆರಾಕ್ಸ್, ಭಾವಚಿತ್ರ ಹಾಗೂ ತಮ್ಮ ಮೊಬೈಲ್ ನಂಬರನ್ನು ಲಿಂಗಣ್ಣ, ನಂ.2793, 2ನೇ ಮುಖ್ಯ ರಸ್ತೆ, 2ನೇ ಕ್ರಾಸ್, ಜಯನಗರ, ಮೈಸೂರು -570014 ಇಲ್ಲಿಗೆ ಕಳುಹಿಸಬೇಕು ಎಂದು ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.