March 16, 2026
IMG-20260201-WA0210.jpg

ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡ ಜನಪರ ಬಜೆಟ್ – ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ 2026–27ನೇ ಸಾಲಿನ ಕೇಂದ್ರ ಬಜೆಟ್ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ರೂಪಿಸಲಾಗಿದೆ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಜೆಟ್‌ನಲ್ಲಿ ರೈತರು ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದರಿಂದ ಗ್ರಾಮೀಣ ಆರ್ಥಿಕತೆ ಬಲಗೊಳ್ಳುವ ಜೊತೆಗೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೂ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.
ವಿಶೇಷವಾಗಿ ಗೋಡಂಬಿ, ಕೋಕೋ ಹಾಗೂ ತೆಂಗು ಬೆಳೆಗಾರರಿಗೆ ಹೆಚ್ಚುವರಿ ಸಹಾಯಧನ ಹಾಗೂ ಸೌಲಭ್ಯಗಳನ್ನು ಒದಗಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಗ್ರಾಮೀಣ ಪ್ರದೇಶದ ರೈತರಿಗೆ ಸುಲಭ ಸಾಲ ಸೌಲಭ್ಯ ಒದಗಿಸುವ ಮೂಲಕ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದ್ದು, ಹೊಸ ಡೈರಿಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಿರುವುದು ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ. ಒಟ್ಟಾರೆ ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ರೂಪಿಸಲಾದ ಜನಪರ ಬಜೆಟ್ ಇದಾಗಿದೆ ಎಂದು ಪ್ರಭಾಕರ ಮ್ಯಾಸನಾಯಕ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading