ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ರಾಜ್ಯ ಸರ್ಕಾರದ ಮಹತ್ವಪೂರ್ಣ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಗ್ರಾಮೀಣ ಮಟ್ಟದಲ್ಲಿ ನಡೆಯುವ ಸಭೆಗಳಲ್ಲಿ ಸಾರ್ವಜನಿಕರಿಗೆ ನೀಡಬೇಕು ಎಂದು ಸಾಲಿಗ್ರಾಮ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ.ಕೃಷ್ಣೇಗೌಡ ಮನವಿ ಮಾಡಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ನಾಡಿನ ಸರ್ವ ಜನರಿಗೂ ಸರ್ಕಾರದ ಕಾರ್ಯಕ್ರಮಗಳು ತಲುಪಬೇಕು ಆ ಮೂಲಕ ಅವರುಗಳಿಗೆ ಹೆಚ್ಚಿನ ಅನುಕೂಲವಾಗಬೇಕೆಂದು ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಪ್ರಮುಖ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪುತ್ತಿರುವ ಬಗ್ಗೆ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸವಿವರವಾಗಿ ತಿಳಿಸಬೇಕು ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ನಡೆಸುವ ಸಭೆ, ಸಮಾರಂಭ, ಅರಿವು ಶಿಬಿರಗಳಲ್ಲಿ ಅಧಿಕಾರಿಗಳು ಒಂದೊಂದು ಯೋಜನೆ ಬಗ್ಗೆ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಮಟ್ಟದ ಯೋಜನೆಯ ಫಲಾನುಭವಿಗಳ ಸ್ಪಷ್ಟ ಚಿತ್ರಣವನ್ನು ನೀಡಬೇಕು. ಆ ಮೂಲಕ ಪ್ರತಿ ಮನೆಮನೆಯಲ್ಲೂ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಬರಲು ಸಾಧ್ಯವಾಗುತ್ತದೆ ಹಾಗೂ ಯೋಜನೆಯನ್ನು ಸರ್ವರು ಪಡೆದುಕೊಳ್ಳಲು ನೆರವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
About The Author
Discover more from JANADHWANI NEWS
Subscribe to get the latest posts sent to your email.