May 1, 2026
IMG-20260501-WA0219.jpg

ಚಳ್ಳಕೆರೆ, ಮೇ 1: ತಾಲೂಕಿನ ಪರಶುರಾಂಪುರ ಹೋಬಳಿ ಸಮೀಪ ಕಾರ್ಮಿಕರ ಮಕ್ಕಳಿಗಾಗಿ ಸುಮಾರು ₹45 ಕೋಟಿ ವೆಚ್ಚದಲ್ಲಿ ಕಾರ್ಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಟಿ ರಘುಮೂರ್ತಿ ತಿಳಿಸಿದ್ದಾರೆ.
ನಗರದ ವಾಲ್ಮೀಕಿ ಕಲ್ಯಾಣ ಮಂಟಪದ ಬಳಿ ಎ ಐ ಟಿ ಯು ಸಿ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಮಿಕ ವರ್ಗವು ಶ್ರಮಜೀವಿ ವರ್ಗವಾಗಿದ್ದು, ಅವರ ಮಕ್ಕಳ ಶಿಕ್ಷಣ ಹಾಗೂ ಕಲ್ಯಾಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಬಜೆಟ್ ಅಧಿವೇಶನದಲ್ಲಿ ಕಾರ್ಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದು ಶಾಸಕ ರಘುಮೂರ್ತಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಐಟಿಯುಸಿ ಸಂಘಟನೆಯ ಅಧ್ಯಕ್ಷ ಶಿವರುದ್ರಪ್ಪ ದೊಡ್ಡ ಉಳ್ಳಾರ್ತಿ, ಕರಿಯಣ್ಣ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading