ಚಳ್ಳಕೆರೆ: ನಗರದ ಹೆಗ್ಗೆರೆ ತಾಯಮ್ಮ ತಿಪ್ಪೇಸ್ವಾಮಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಡಯಟ್ ಉಪನ್ಯಾಸಕಿ ಲೀಲಾವತಿ, ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ್ ಬಿ. ಸೇರಿದಂತೆ ಶಿಕ್ಷಕರಾದ ಶಿವಣ್ಣ ಆರ್.ಜಿ., ಪೂರ್ಣಿಮಾ, ವೇಣಿ, ಸುಧಾ, ರೂಪಾ, ಕುಸುಮಾವತಿ, ಉಮಾ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ಗಣ್ಯರು ಹಾಗೂ ಶಿಕ್ಷಕರು, ಮಕ್ಕಳಿಗೆ ಸಿಹಿ ಮತ್ತು ಚಾಕೊಲೇಟ್ ವಿತರಿಸುವ ಮೂಲಕ ಹೊಸ ಶೈಕ್ಷಣಿಕ ವರ್ಷದ ಶುಭಾರಂಭ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಮತ್ತು ಕಲಿಕೆಯ ಆಸಕ್ತಿ ಮೂಡಿಸುವ ಉದ್ದೇಶದಿಂದ ಶುಭಾಶಯಗಳನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.