July 12, 2025
1751379421792.jpg


ಹಿರಿಯೂರು :
ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್ ಎಸ್ ಎಲ್ ಸಿ ಫಲಿತಾಂಶ ಈ ವರ್ಷ ಕುಸಿದಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ, ಶಿಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಿ ಶಿಕ್ಷಕರ ವೇತನ ತಡೆಹಿಡಿಯಲು ಮುಂದಾಗಿದ್ದು, ಶಿಕ್ಷಣ ಇಲಾಖೆಯ ಈ ಕ್ರಮವನ್ನು ಹಿಂಪಡೆಯುವಂತೆ ನೌಕರರು ನಗರದ ಶಾಲಾಶಿಕ್ಷಣಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದ ಹಿನ್ನೆಡೆಗೆ ಹಲವಾರು ಕಾರಣಗಳಿದ್ದು, ಈ ಬಗ್ಗೆ ಇಲಾಖೆ ಪರಿಶೀಲಿಸಿ ಶಿಕ್ಷಕರ ವೇತನವನ್ನು ತಡೆಹಿಡಿಯದಂತೆ ಮನವಿ ಮಾಡಿದ್ದಾರೆ, ಮುಂದಿನ ದಿನಗಳಲ್ಲಿ ಇಲಾಖೆ ನಿರ್ದೇಶನದಂತೆ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವುದಾಗಿ ತಾಲ್ಲೂಕು ಅನುದಾನಿತ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿದೆ.
ಈ ಸಂದರ್ಭದಲ್ಲಿ ಅನುದಾನಿತ ಶಿಕ್ಷಕರನೌಕರರ ಸಂಘದ ಅಧ್ಯಕ್ಷರಾದ ಅಶೋಕ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಲೋಹಿತ್, ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ರಂಗಸ್ವಾಮಿ, ಅರವಿಂದ್ ಹೆಚ್.ಸಿ, ಶರಣಪ್ಪ, ದಯಾನಂದ್, ಶಿವಶಂಕರ್ ಮಠದ್, ಉಮಾಶಂಕರ್, ವೆಂಕಟೇಶ್, ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading