December 15, 2025
1754065380743.jpg



ಚಿತ್ರದುರ್ಗ  ಆಗಸ್ಟ್ 01:
ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಯುವ ಜನತೆಯು ದುಶ್ವಟಗಳಿಂದ ದೂರವಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪಣತೊಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಅವರು ಮನವಿ ಮಾಡಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಚಿತ್ತರಗಿ ಇಳಕಲ್ ಶ್ರೀ ವಿಜಯಮಹಂತೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಮ.ನಿ.ಪ್ರ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯಲ್ಲಿ ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ದುಶ್ಚಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಯುವ ಜನತೆಯು ದುಶ್ಚಟಗಳನ್ನು ಬಿಟ್ಟು ಸುಸಂಸ್ಕೃತರಾಗಿ ಬದುಕಬೇಕು. ಪಠ್ಯಪುಸ್ತಕಗಳಲ್ಲಿ ಮದ್ಯ ಮತ್ತು ಮಾದಕ ವ್ಯವಸನಗಳ ದುಷ್ಪಾರಿಣಾಗಳ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಮಾತನಾಡಿ, ಯುವ ಜನತೆ ಮದ್ಯ, ಮಾದಕ ವ್ಯಸನಗಳಿಂದ ದೂರವಿದ್ದು, ವ್ಯಸನಮುಕ್ತ, ಸ್ವಾಸ್ಥö್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ದುಶ್ಚಟಗಳು ಸಮಾಜ, ಕುಟುಂಬಕ್ಕೆ ಮಾರಕವಾಗಿವೆ. ಇದರ ಜೊತೆಗೆ ಯುವ ಜನತೆ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದು, ಮೊಬೈಲ್ ಚಟ ಅಂಟಿಸಿಕೊAಡಿರುವುದು ತುಂಬಾ ಆಘಾತಕಾರಿಯಾಗಿದ್ದು, ಇದರಿಂದಾಗಿ ತಲೆನೋವು, ನಿದ್ರಾಹೀನತೆ, ಆಲಸ್ಯ, ಓದಿನಲ್ಲಿ ನಿರಾಸಕ್ತಿ, ಚಟುವಟಿಕೆ ರಹಿತ ಬದುಕು ಸೇರಿದಂತೆ ಹಲವಾರು ರೀತಿಯ ಆರೋಗ್ಯ ಸಂಬAಧಿ ಸಮಸ್ಯೆಗಳು ಕಾಡಲಿವೆ ಎಂದು ತಿಳಿಸಿದ ಅವರು, ಯುವ ಜನತೆಯು ತಮ್ಮ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಚಟವು, ಚಟುವಟಿಕೆ ಹಾಗೂ ಎಲ್ಲರಿಗೂ ಮಾದರಿ ಆಗುವಂತಿರಬೇಕು. ಹಠ ಉತ್ತಮ ಹಾದಿ ತೋರಿಸುವಂತಿರಬೇಕು ಎಂದು ಕಿವಿಮಾತು ಹೇಳಿದರು.
ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಪ್ರಮುಖವಾಗಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದುದು ಎಂದು ತಿಳಿಸಿದ ಅವರು, ಜನರು ವ್ಯಸನ ಮುಕ್ತರಾದರೆ ಸಮಾಜ ಸುಧಾರಣೆಯಾಗಲಿದೆ ಎಂದು ಹೇಳಿದರು.
ಮಾನಸಿಕ ಆರೋಗ್ಯ ತಜ್ಞ ವೈದ್ಯರಾದ ಡಾ.ಮಂಜುನಾಥ್ ಅವರು ಉಪನ್ಯಾಸ ನೀಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಚಟಗಳಿಂದ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ವ್ಯಸನಗಳಿಗೆ ಬಲಿಯಾದರೆ ಪ್ರಜ್ಞಾವಂತಿಕೆ ಕಡಿಮೆಯಾಗಿ ಕ್ರಿಮಿನಲ್ ಆಗಿ ಬದಲಾಗುತ್ತಾರೆ. ವಿವಿಧ ಅಪರಾಧಗಳನ್ನು ಮಾಡಿ ಜೈಲುಪಾಲಾಗುವ ಬಹುಪಾಲು ವಿವಿಧ ಬಗೆಯ ವ್ಯಸನಿಗಳೇ ಆಗಿರುತ್ತಾರೆ. ಸಮಾಜದಲ್ಲಿ ಚಟಗಳು ಜಾಸ್ತಿಯಾದರೆ ಕ್ರಿಮಿನಲ್ ಪ್ರಕರಣಗಳು ಸಹ ಹೆಚ್ಚಳವಾಗುತ್ತವೆ ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಸರ್ಕಾರ ಆಚರಣೆ ಮಾಡುತ್ತಿದೆ. ಮಹಾಂತ ಶಿವಯೋಗಿಗಳು ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಡಾ. ಮಹಾಂತ ಶಿವಯೋಗಿಗಳು ಶ್ರಮಿಸಿದ್ದಾರೆ ಎಂದರು.
ಮಹಾAತ ಶಿವಯೋಗಿಗಳ ಸಾಧನೆಯನ್ನು ಸ್ಮರಿಸಿ, ಸಮಾಜವನ್ನು ವ್ಯವಸಮುಕ್ತ ಮಾಡಬೇಕು. ಸದೃಢ ಸಮಾಜ ಹಾಗೂ ದೇಶ ನಿರ್ಮಾಣ ಮಾಡಬೇಕು ಎಂಬ ಅವರ ಆಶಯವನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರು ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಭೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಚಿತ್ತರಗಿ ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನದ ಭಕ್ತರು ಹಾಗೂ ಮಹಾಂತ ಶಿವಯೋಗಿಗಳ ಆಪ್ತರೂ ಆದ ಕೆ. ಚಂದ್ರಪ್ಪ, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಎಂ.ಎನ್.ರವಿಕಾAತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು, ಆಕಾಶವಾಣಿಯ ನವೀನ್ ಮಸ್ಕಲ್ ಸೇರಿದಂತೆ ಸರ್ಕಾರಿ ವಿಜ್ಞಾನ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ರಂಗಕರ್ಮಿ ಕೆಪಿಎಂ ಗಣೇಶಯ್ಯ ನಿರೂಪಿಸಿ, ವಂದಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading