ಚಿತ್ರದುರ್ಗ).ನ.01:
ಕನ್ನಡ ರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಸ್ತಬ್ಧಚಿತ್ರ ಮೆರವಣಿಗೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ತಾಯಿ ಭುವನೇಶ್ವರಿ ಭಾವಚಿತ್ರ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.
ಆಕರ್ಷಕ ಸ್ತಬ್ದಚಿತ್ರ ಮೆರವಣಿಗೆ
ನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಕಲರವವನ್ನು ಸ್ತಬ್ದಚಿತ್ರ ಮೆರವಣಿಗೆ ಮೂಡಿಸಿತು. ‘ಹೊನ್ನ ಬಿತ್ತೇವು ಹೊಲಕೆಲ್ಲಾ’ ಎಂಬ ನಾಣ್ನುಡಿಯಂತೆ ಜೋಡೆತ್ತುಗಳೊಂದಿಗೆ ಹೊಲದಲ್ಲಿ ಬಿತ್ತನೆ ಮಾಡುತ್ತಿರುವ ರೈತನ ಪ್ರತಿಮೆ ಇರುವ ಕೃಷಿ ಇಲಾಖೆಯ ಸ್ತಬ್ದಚಿತ್ರ ಮೆರವಣಿಗೆಯಲ್ಲಿ ಜನರ ಗಮನ ಸೆಳೆಯುತು.
ಕನ್ನಡಗರ ಅಸ್ಮಿತೆ ಹಣತೆ ಹಚ್ಚಿ ವಿಶಾಲ ಕನ್ನಡ ಸಾಮ್ರಾಜ್ಯ ಸ್ಥಾಪನೆಗೆ ನಾಂದಿ ಹಾಡಿದ ಕದಂಬ ರಾಜ ಮಯೂರ ವರ್ಮನ ಪುತ್ಥಳಿ ಜೊತೆಗೆ, ಜಿಲ್ಲೆಯ ತೋಟಗಾರಿಕೆ ಬೆಳೆಗಳ ಮಾಹಿತಿ ನೀಡುವ ತೋಟಗಾರಿಕೆ ಇಲಾಖೆ ಸ್ತಬ್ದಚಿತ್ರ ನೋಡುಗರಲ್ಲಿ ಕನ್ನಡ ಅಭಿಮಾನವನ್ನು ಮೂಡಿಸಿತು.
ಮಹಿಳೆಯರ ಸಬಲೀಕರಣಕ್ಕೆ ಇಂಬಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹಲಕ್ಷ್ಮೀ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಪುಷ್ಪಾಲಂಕೃತಗೊAಡ ಕೆ.ಎಸ್.ಆರ್.ಟಿ.ಸಿ ಶಕ್ತಿ ಸ್ತಬ್ದಚಿತ್ರಗಳು ಯೋಜನೆಗಳ ಮಹತ್ವ ಸಾರಿದವು.
ಪ್ರಥಮ ಬಹುಮಾನಕ್ಕೆ ಭಾಜವಾದ ಸಾರಿಗೆ ಇಲಾಖೆ ಸ್ತಬ್ದಚಿತ್ರ:
ಸಾರಿಗೆ ಇಲಾಖೆಯ ಪ್ರಾದೇಶಿಕ ಕಚೇರಿಯಿಂದ ರಸ್ತೆ ಸುರಕ್ಷತೆ ಹಾಗೂ ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸ್ತಬ್ದಚಿತ್ರ ಎಲ್ಲರ ಮೆಚ್ಚುಗೆ ಗಳಿಸುವುದರೊಂದಿಗೆ ಪ್ರಥಮ ಬಹುಮಾನಕ್ಕೆ ಭಾಜವಾಯಿತು. ತೋಟಗಾರಿಕೆ ಹಾಗೂ ಕೆ.ಎಸ್.ಆರ್.ಟಿ ಸ್ತಬ್ದಚಿತ್ರಗಳು ಅನುಕ್ರಮವಾಗಿ ದ್ವೀತಿಯ ಹಾಗೂ ತೃತೀಯ ಬಹುಮಾನ ಗಳಿಸಿದವು. ಶಿಕ್ಷಣ ಹಾಗೂ ಕೃಷಿ ಇಲಾಖೆ ಸ್ತಬ್ದಚಿತ್ರಗಳು ಸಮಾದಾನಕರ ಬಹುಮಾನ ಪಡೆದವು. ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅರಣ್ಯ, ಪ್ರವಾಸೋದ್ಯಮ ಇಲಾಖೆಗಳ ಸ್ತಬ್ದಚಿತ್ರಗಳು ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸಿದವು.


ಮೆರವಣಿಗೆಯಲ್ಲಿ ಸೇವಾದಳ, ಶಾಲಾ ಮಕ್ಕಳ ವಾದ್ಯ ತಂಡ, ಗೊಂಬೆ ಹಾಗೂ ಪಟ ಕುಣಿತ, ಡೊಳ್ಳು, ವೇಷಗಾರ, ಬ್ಯಾಂಡ್ ಸೇರಿದಂತೆ ಇತರೆ ಸಾಂಸ್ಕೃತಿಕ ಕಲಾ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ನಗರದ ಮಹಾತ್ಮ ಗಾಂಧಿ, ಎಸ್.ಬಿ.ಎಂ, ಅಂಬೇಡ್ಕರ್ ಹಾಗೂ ಓಬವ್ವ ವೃತ್ತದ ಮೂಲಕ ಪೊಲೀಸ್ ಕವಾಯತು ಮೈದಾನ ತಲುಪಿದವು.
ಈ ವೇಳೆ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ನಗರ ಸಭೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಡಾ.ನಾಗವೇಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.