ಹಿರಿಯೂರು:
ಅತೀ ಹೆಚ್ಚು ಪ್ಲಾಸ್ಟಿಕ್ ಬಳಸುವ ಬದಲಾಗಿ ಬಟ್ಟೆಯಿಂದ ತಯಾರಿಸಿದ ಕೈಚೀಲಗಳನ್ನು ಬಳಸುವುದರಿಂದ ವನ್ಯ ಜೀವಿಗಳ ಸಂರಕ್ಷಣೆ ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು.


ನಗರದ ನಗರಸಭೆಯಿಂದ ವಿತರಿಸಲು ತಯಾರಿಸದ ಬಟ್ಟೆಯ ಕೈಚೀಲವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಮಾರಕವಾದ ಕ್ಯಾನ್ಸರ್ ರೋಗಗಳು ಮನುಷ್ಯರಲ್ಲಿ ಭಾಧಿಸುತ್ತದೆ. ಹಣ್ಣು ,ತರಕಾರಿ ಊಟದ ಪೊಟ್ಟಣಗಳನ್ನು ಕಟ್ಟಲು ಪಲಾಸ್ಟಿಕ್ ಪೇಪರ್ ಗಳ ಬಳಕೆಯನ್ನು ಮಾಡಬಾರದು. ಪ್ಲಾಸ್ಟಿಕ್ ಪೇಪರ್ ವಿಷಕಾರಿ ಅಂಶಗಳನ್ನು ಒಳಗೊಂಡಿದ್ದು ಇದರ ಬಗ್ಗೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂಬುದಾಗಿ ಅವರು ಹೇಳಿದರು.
ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿಗಳಾದ ಟಿ.ವೆಂಕಟೇಶ್ ಅವರು ಮಾತನಾಡಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ದೊಡ್ಡ ಮಾರಕವಾಗುವುದು ಎಂಬುದಾಗಿ ಅವರು ಹೇಳಿದರು.
ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಅವರು ಮಾತನಾಡಿ ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸುವ ವ್ಯವಸ್ಥೆ ಮಾಡಲಾಗುವುದು. ಬಳಸಿದವರಿಗೆ ದಂಡ ವಿಧಿಸುವುದರ ಮೂಲಕ ಎಚ್ಚರಿಕೆ ನೀಡಲಾಗುವುದು ಎಂಬುದಾಗಿ ಅವರು ಹೇಳಿದರು.
ಪೌರಾಯುಕ್ತರಾದ ಎ.ವಾಸೀಂ ಅವರು ಮಾತನಾಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಗರದ ಸ್ವಚ್ಚತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡುವುದರಿಂದ ಸಾರ್ವಜನಿಕರ ಆರೋಗ್ಯ ದೃಷ್ಠಿ ಉತ್ತಮವಾಗಿರುತ್ತದೆ. ಎಂದರಲ್ಲದೆ,
ಪ್ಲಾಸ್ಟಿಕ್ ಬಳಕೆಯಿಂದ ಹಲವಾರು ರೋಗಗಳು ಹರಡುವುದರಿಂದ ಸಾರ್ವಜನಿಕರು ಎಚ್ಚೆತ್ತುಕೊಂಡು ಬಟ್ಟೆ ಬ್ಯಾಗುಗಳನ್ನು ಬಳಸುವುದರಿಂದ ನೀವು ಆರೋಗ್ಯವಾಗಿರಲು ಸಾಧ್ಯವಾಗುತ್ತದೆ. ಪ್ಲಾಸ್ಟಿಕ್ ಮುಕ್ತ ನಗರವನ್ನ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂಬುದಾಗಿ ಅವರು ಹೇಳಿದರು.
ತಾಲ್ಲೂಕು ದಂಡಾಧಿಕಾರಿ ಸಿದ್ದೇಶ್ ಅವರು ಮಾತನಾಡಿ ಸರ್ಕಾರಿ ಕಚೇರಿಗಳಲ್ಲಿಯೂ ಸಹ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಚೇರಿ ಸಿಬ್ಬಂದಿ ವರ್ಗದವರು ಪಾಲಿಸಬೇಕು ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಎ.ಡಿ.ಸಿ.ಕುಮಾರಸ್ವಾಮಿ, ನಗರಸಭೆ ವ್ಯವಸ್ಥಾಪಕಿ ಬಿ.ಆರ್.ಮಂಜುಳ, ಆರೋಗ್ಯ ನಿರೀಕ್ಷಕಿ ಸಂಧ್ಯಾ, ಕಂದಾಯ ನಿರೀಕ್ಷಕರಾದ ಜಬೀವುಲ್ಲಾ, ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.