ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ ಇ–ಖಾತಾ ಒಂದು ಅಧಿಕೃತ ಆಸ್ತಿ ದಾಖಲೆ ಆಗಿದ್ದು, ರಾಜ್ಯ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಆಸ್ತಿಗಳ ಸಂಪೂರ್ಣ ಮಾಹಿತಿಯನ್ನು ಇ–ಆಸ್ತಿ ತಂತ್ರಾಂಶದಲ್ಲಿ ದಾಖಲಿಸಿ ಪರಿಶೀಲಿಸಿದ ನಂತರ ಡಿಜಿಟಲ್ ಸಹಿಯೊಂದಿಗೆ ಗಣಕೀಕೃತ ಪ್ರಮಾಣ ಪತ್ರವನ್ನು ಆಸ್ತಿ ಮಾಲೀಕರಿಗೆ ನೀಡಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಕರೆ ನೀಡಿದರು.
ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಆಸ್ತಿ ಮಾಲೀಕರಿಗೆ ಇ–ಖಾತಾ ಗಣಕೀಕೃತ ಅಧಿಕೃತ ಆಸ್ತಿ ದಾಖಲೆಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.
ಇ–ಆಸ್ತಿ ತಂತ್ರಾಂಶದ ಮೂಲಕ ದಿನಾಂಕ 20–04–2016 ರಿಂದ ಇ–ಖಾತಾ ನೀಡುವುದು ಕಡ್ಡಾಯವಾಗಿದೆ ಎಂಬುದಾಗಿ ಸುತ್ತೋಲೆ ಹೊರಡಿಸಲಾಗಿದ್ದು, ಯಾವುದೇ ರೀತಿಯ ಕೈಬರಹ ಸಹಿಯುಳ್ಳ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಅದರಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ಮಾಲೀಕರು ಇ–ಖಾತಾ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಪುರಸಭಾ ಅಧಿಕಾರಿಗಳನ್ನು ಸಂಪರ್ಕಿಸಿ ಸಮರ್ಪಕ ಮಾಹಿತಿ ಪಡೆದುಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಎನ್. ನಾಗಭೂಷಣ್, ವ್ಯವಸ್ಥಾಪಕ ಕುಮಾರಪ್ಪ, ಆರ್.ಓ. ಯೋಗೀಶ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.