ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ:
ಇಂದಿನ ದಿನಮಾನಗಳಲ್ಲಿ ಮಕ್ಕಳ ಮೇಲೆ ಪೋಷಕರಿಗೆ ಎಷ್ಟೇ ಕಾಳಜಿ ಮತ್ತು ಜವಾಬ್ದಾರಿ ಇದ್ದರೂ ಅದು ಕಡಿಮೆ ಎನಿಸುವ ಸ್ಥಿತಿ ನಿರ್ಮಾಣವಾಗಿದೆ. ಪೋಷಕರು ತಮ್ಮ ಮಕ್ಕಳ ಚಲನವಲನಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕು ಎಂದು ಜನರಲ್ ಕಾರಿಯಪ್ಪ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ಹಂಜಿ ಶಿವಸ್ವಾಮಿ ಪೋಷಕರಿಗೆ ಕಿವಿಮಾತು ಹೇಳಿದರು.
ಪಟ್ಟಣದ ಗಣೇಶ ಸದನದಲ್ಲಿ ಆಯೋಜಿಸಲಾಗಿದ್ದ ಜನರಲ್ ಕಾರಿಯಪ್ಪ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಜಿ.ಸಿ.ಎಂ ಉತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಮನೆಯಲ್ಲಿ ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಹಾಗೂ ಶಾಲೆಯಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಕಾಣಬೇಕು. ಮಕ್ಕಳಲ್ಲಿ ಅರಿವಿನ ಜಾಗೃತಿ ಮೂಡಿಸುವ ಜೊತೆಗೆ ಆತ್ಮವಿಶ್ವಾಸ ತುಂಬುವುದು ಅತ್ಯಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಂಜುನಾಥ್, ನಿರ್ದೇಶಕ ಪ್ರಹ್ಲಾದ್‌ರಾವ್, ವಸಂತ ಶೆಟ್ಟಿ, ಮುಖ್ಯ ಶಿಕ್ಷಕಿ ಸುಮಿತ್ರ, ಆಡಳಿತಾಧಿಕಾರಿ ಸತೀಶ್ ಸೇರಿದಂತೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ 2024–25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ನಮ್ರತಾ ಟಿ.ಎಸ್, ಹಾಗೂ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ಕುಮಾರಿ ವಿ. ಚೈತ್ರ (ಗೊರವಿನಕಲ್ಲು) ಸೇರಿದಂತೆ ಉನ್ನತ ವ್ಯಾಸಂಗ ಮತ್ತು ಹುದ್ದೆಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
About The Author
Discover more from JANADHWANI NEWS
Subscribe to get the latest posts sent to your email.