September 15, 2025
IMG-20250302-WA0000.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ಯಾವುದೇ ದೇಶದ ಪ್ರಗತಿಯ ಸಂಕೇತವೆಂದರೆ ಅದು ಶಿಕ್ಷಣ ಕ್ಷೇತ್ರ ಎಂದು ಶಾಸಕ
ಡಿ.ರವಿಶಂಕರ್ ಹೇಳಿದರು.

ಅವರು ತಾಲೂಕಿನ ಹರದನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 60ಲಕ್ಷ ರೂ ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಾಲಾ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳು ಅಭಿವೃದ್ಧಿಯಾಗಿದ್ದರೆ ಆದೇಶವು ಪ್ರಗತಿ ಪಥದತ್ತ ಸಾಗುತ್ತಿದೆ ಎಂದರ್ಥ. ಆ ನಿಟ್ಟಿನಲ್ಲಿ ಸರ್ವರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸುವಂತಹ ಕೆಲಸವನ್ನು ಮಾಡಬೇಕು ಎಂದರು.

ಸರ್ಕಾರಿ ಶಾಲೆಗಳಲ್ಲಿ ಹಲವು ಸೌಲಭ್ಯಗಳು ದೊರಕುತ್ತಿದ್ದು ಅವುಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ವ್ಯಾಸಂಗವನ್ನು ಮಾಡಿ ಭವಿಷ್ಯದ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.

ಹರದನಹಳ್ಳಿ ಗ್ರಾಮದಲ್ಲಿ ಕೆ ಶಿಪ್ ವತಿಯಿಂದ ನಡೆಯುತ್ತಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗ್ರಾಮದ ಬಡಾವಣೆ ಮತ್ತು ಕೇಂದ್ರ ಸ್ಥಾನದಲ್ಲಿ ಬಸ್ ನಿಲ್ದಾಣಗಳನ್ನು ನಿರ್ಮಿಸುವಂತೆ ಹಾಗೂ ಚರಂಡಿಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಗ್ರಾಮದಲ್ಲಿ ಗ್ರಂಥಾಲಯ ಕಟ್ಟಡ ನಿರ್ಮಾಣ ಹಾಗೂ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ ಮಾಡುವ ಮೂಲಕ ಗ್ರಾಮದ ಸಮಗ್ರ ಅಭಿವೃದ್ಧಿಯನ್ನು ಮಾಡಿ ಗ್ರಾಮದ ಜನರ ಋಣವನ್ನು ತೀರಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಎಸ್.ಆರ್.ಮಂಜುಳಾ ರಮೇಶ್ ಮಾತನಾಡಿ ಗ್ರಾಮದಲ್ಲಿ ಕೇಶಿಪ್ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಅಪೂರ್ಣಗೊಂಡಿದ್ದು ಇದರಿಂದ ಸಾರ್ವಜನಿಕರಿಗೆ ದಿನನಿತ್ಯ ತೊಂದರೆ ಉಂಟಾಗುತ್ತಿದೆ ಕೂಡಲೇ ಕಾಮಗಾರಿಗಳನ್ನು ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು, ಗ್ರಾಮದ ಬಡಾವಣೆ ಮತ್ತು ಬಸ್ ನಿಲ್ದಾಣದಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಬೇಕು, ಗ್ರಂಥಾಲಯ ಕಟ್ಟಡ ನಿರ್ಮಾಣ, ಚರಂಡಿ ಹಾಗೂ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿಇಓ ಕೃಷ್ಣಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸ್ವಾಮಿಗೌಡ, ತಾ.ಪಂ.ಮಾಜಿ ಅಧ್ಯಕ್ಷ ಹೆಚ್.ಟಿ.ಮಂಜಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಉದಯ ಶಂಕರ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಹೆಚ್.ಟಿ.ಮಂಜು, ಪ್ರದೀಪ್, ಉಪಾಧ್ಯಕ್ಷ ಮಹದೇವ್, ಮಾಜಿ ಉಪಾಧ್ಯಕ್ಷ ಹೆಚ್.ಟಿ.ರಮೇಶ್, ಸದಸ್ಯರುಗಳಾದ ಆರ್.ಮಂಜುಳಾಚಂದ್ರು, ಜಯರಾಮ, ನವೀನ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ಎಲ್.ವಿನೀತ್, ಎಸ್ ಡಿ ಎಂ ಸಿ ಅಧ್ಯಕ್ಷ ಬಸವರಾಜು, ಉಪ್ಪಾರ ಸಂಘದ ಅಧ್ಯಕ್ಷ ರಾಜೇಶ್, ಸಿ ಆರ್ ಪಿ ಧರಣಿ, ಮುಖ್ಯ ಶಿಕ್ಷಕಿ ರೇಣುಕಾ, ಶಿಕ್ಷಕ ಹೆಚ್.ಟಿ.ಪಾಂಡು, ಪಿಡಿಓ ಮೋಹನ್, ಕಾರ್ಯದರ್ಶಿ ಪುಷ್ಪಕಾಂತ್, ಮುಖಂಡರುಗಳಾದ ತಿಮ್ಮೇಗೌಡ, ಕೃಷ್ಣೇಗೌಡ, ಬಸವೇಗೌಡ, ಎಚ್‌.ಟಿ.ಪ್ರಕಾಶ್, ಗೋವಿಂದರಾಜು, ಗೋಪಾಲ್, ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading