December 14, 2025
IMG20250402112250.jpg

ಚಳ್ಳಕೆರೆ ಏ.2.

ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಸರ್ವ ಸಮುದಾಯಗಳಿಗೆ ಮಾದರಿಯಾಗಿದ್ದಾರೆ. ಬಸವಾದಿ ಶರಣರ ವಚನಗಳು ಸಕಾರಾತ್ಮಕ ಬದಲಾವಣೆಗೆ ರಾಜಮಾರ್ಗ ಎಂಬುದು ಇದರಿಂದ ಸಾಬೀತಾಗುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ನೇಕಾರ ಸಮುದಾಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜೇಡರ ದಾಸಿಮಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಸ್ಫೂರ್ತಿ ಹೆಚ್ಚುತ್ತದೆ. ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಲು ಶರಣರ ವಚನಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತಾ ಪಂ ಇ ಒ ಶಶಿಧರ್ ಮಾತನಾಡಿ ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸಮಾಜಕ್ಕೆ ಇಂಥಹ ಮಹಾನ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿ ಎಂಬ ಆಶಯದಿಂದ ರಾಜ್ಯ ಸರಕಾರ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.
ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ.ಸದಸ್ಯವಿ.ವೈ.ಪ್ರಮೋದ್.ಜಮಾಜದ ಮುಖಂಡ ಜಯರಾಂ.ಕೊಲಂಮ್ಮನಹಳ್ಳಿ ಪೀತಂಬರ್,ಉಪನ್ಯಾಸಕರ್ ಚಂದ್ರ ಶೇಖರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಸುಮಾ ಭರಮಯ್ಯ, ಸದಸ್ಯರಾದ ಕೆ..ವೀರಭದ್ರಪ್ಪ, , ರಮೇಶ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ರಂಗಸ್ವಾಮಿ, ವಕೀಲ ಶಶಿಧರ್, ಶಿರಸ್ತೆದಾರ್ ಸದಾಶಿವಪ್ಪ, ಪೌರಾಯುಕ್ತ ಜಗರೆಡ್ಡಿ,
ಸತ್ಯನಾರಾಯಣ ಇರಿಗೇಷನ್ ಮಾಲೀಕರಾದ ಸತ್ಯನಾರಾಯಣ,
ನಿವೃತ್ತ ಪ್ರಾಂಶುಪಾಲ ಶಿವಲಿಂಗಪ್ಪ, ಸಮಾಜದ ಮುಖಂಡರಾದ ರವಿಕುಮಾರ್, ವಿರೇಶ್, ಯರಿಸ್ವಾಮಿ, ಬಾಸ್ಕರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading