ವರದಿ: ಶಿವಮೂರ್ತಿ ನಾಯಕನಹಟ್ಟಿ.
ನಾಯಕನಹಟ್ಟಿ: ಪಟ್ಟಣದ ಮಯೂರ್ ಇಂಟರ್ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿನಿ 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 614 ಅಂಕಗಳನ್ನು ಪಡೆದು ಶಾಲೆಗೆ ಟಾಪರ್ ಆಗಿದ್ದಾರೆ.
ನಮ್ಮ ಶಾಲೆಯ ವಿದ್ಯಾರ್ಥಿನಿ ಅಮೃತ ಓ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ನಮ್ಮ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಅವರು ಇನ್ನು ಮುಂದಿನ ವಿದ್ಯಾಭ್ಯಾಸಗಳಲ್ಲಿ ಹೆಚ್ಚು ಹೆಚ್ಚು ಅಂಕಗಳನ್ನು ಗಳಿಸಿ ನಮ್ಮ ಹಾಗೂ ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಲಿ ಎಂದು ಕಾರ್ಯದರ್ಶಿ ಡಾ. ಎಂ ಮೈಲಾರಸ್ವಾಮಿ ಶುಭ ಹಾರೈಸಿದರು.
2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಒಟ್ಟು 36 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದರೆ, 15 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದ್ದಾರೆ,8 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಮಾಂತೇಶ್ ಟಿ ಮಾಹಿತಿ ನೀಡಿದರು.