ಚಿತ್ರದುರ್ಗ, ಮೇ.2 : 2025ನೇ ಸಾಲಿನ ಎಸ್‌ಎಸ್‌ಎಲ್ಸಿ ಫಲಿತಾಂಶ ಈಗ ಹೊರಬಿದ್ದಿದೆ. ಚಿತ್ರದುರ್ಗ ಜಿಲ್ಲೆಗೆ 23 ನೇ ಸ್ಥಾನ ಬಂದಿದೆ. ರಾಜ್ಯದ ಒಟ್ಟು 22 ಮಕ್ಕಳು 625 ಕ್ಕೆ 625 ಅಂಕಗಳನ್ನು ಪಡೆದು ತಮ್ಮ ತಮ್ಮ ಜಿಲ್ಲೆಯ ಕೀರ್ತಿ ಪತಾಕೆಯನ್ನ ಹಾರಿಸಿದ್ದಾರೆ.ಅದರಲ್ಲಿ ಚಿತ್ರದುರ್ಗ ಜಿಲ್ಲೆಯ ಇಬ್ಬರು ಮಕ್ಕಳು ರ್ಯಾಂಕ್ ಬಂದಿದ್ದಾರೆ. ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳು ಔಟ್ ಆಫ್ ಔಟ್ ತೆಗೆದಿದ್ದಾರೆ. ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಹಿರಿಯೂರು ನಗರದ ನಂದನ್ ಹಾಗೂ ಮೌಲ್ಯ ಇಬ್ಬರು 625ಕ್ಕೆ 625 ಅಂಕಗಳನ್ನ ಗಳಿಸಿದ್ದಾರೆ. ವಿದ್ಯಾರ್ಥಿನಿ ಮೌಲ್ಯ ಅವರ ತಂದೆ ದೇವರಾಜ್ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ.
ಜಿಲ್ಲೆಯಲ್ಲಿಯೇ ರ‌್ಯಾಂಕ್ ಬಂದಿರುವ ಮತ್ತೊಬ್ಬ ವಿದ್ಯಾರ್ಥಿ ನಂದನ್ ಅವರ ತಂದೆ ಓಂಕಾರೇಶ್ವರ ಅವರು ಪಿಗ್ಮಿ ಕಲೆಕ್ಟರ್ ಆಗಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ
ಪ್ರಥಮ ಸ್ಥಾನ ಪಡೆದಿರುವ ಎಚ್.ಓ.ನಂದನ್ ಹಾಗೂ
ಮೌಲ್ಯರವರಿಗೆ ಸಚಿವ ಸುಧಾಕರ್ ರಿಂದ ಅಭಿನಂದನೆ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವ ಎಚ್.ಓ.ನಂದನ್ ಹಾಗೂ ಮೌಲ್ಯರವರಿಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಡಿ.ಸುಧಾಕರ್ ರವರು ದೂರವಾಣಿ ಮೂಲಕ ಕರೆ ಮಾಡಿ ಇಬ್ಬರು ವಿದ್ಯಾರ್ಥಿಗಳಿಗೂ ಹಾಗೂ ಪೋಷಕರಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಎಲ್ಲಾ ಸಹಾಯ ಸಹಕಾರವನ್ನು ಕೊಡುತ್ತೇನೆ ಎಂಬುದಾಗಿ ಭರವಸೆ ನೀಡಿದ್ದಾರೆ ಹಾಗೂ ಈ ಮೂಲಕ ಹಿರಿಯೂರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಗೂ ಕೀರ್ತಿಯನ್ನು ತಂದಿರುವ ಇಬ್ಬರು ವಿದ್ಯಾರ್ಥಿಗಳು ತಂದಿರುವುದರಿಂದ ಅವರ ಪೋಷಕರಿಗೂ ಕೂಡ ಅಭಿನಂದನೆ ಸಲ್ಲಿಸಿರುತ್ತೇನೆ ಎಂಬುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

About The Author
Discover more from JANADHWANI NEWS
Subscribe to get the latest posts sent to your email.