oplus_0
ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಯಾದವನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯದಿಂದ ಶಾಲೆಯ ನೀರಿನ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.
ಶಾಲಾ ಆವರಣದಲ್ಲಿರುವ ಗಿಡಗಳಿಗೆ ನೀರು ಹಾಯಿಸಲು ಅಳವಡಿಸಿದ್ದ ಡ್ರಿಪ್ ಪೈಪ್‌ಗಳು ಹಾಗೂ ನಲ್ಲಿಗಳನ್ನು ಕಳೆದ ಒಂದು ವಾರದಿಂದ ಕಿಡಿಗೇಡಿಗಳು ಕತ್ತರಿಸಿ, ಮುರಿದು ಹಾನಿಗೊಳಿಸುತ್ತಿರುವುದಾಗಿ ಶಾಲೆಯ ಶಿಕ್ಷಕರು ಆರೋಪಿಸಿದ್ದಾರೆ.
ಶಾಲಾ ಸಿಬ್ಬಂದಿ ಹಲವು ಬಾರಿ ದುರಸ್ತಿ ಮಾಡಿಸಿದರೂ ಮತ್ತೆ ಪೈಪ್‌ಗಳು ಮತ್ತು ನಲ್ಲಿಗಳನ್ನು ಕಿತ್ತು ಹಾಳು ಮಾಡುತ್ತಿರುವುದರಿಂದ ಶಾಲೆಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಿದ್ದು, ಸಮಸ್ಯೆ ಎದುರಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಶಾಲಾ ಆವರಣಕ್ಕೆ ಅಗತ್ಯ ಭದ್ರತೆ ಒದಗಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ.


About The Author
Discover more from JANADHWANI NEWS
Subscribe to get the latest posts sent to your email.