October 2, 2026
IMG-20261002-WA0440


ಚಳ್ಳಕೆರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ ಚಳ್ಳಕೆರೆ ಶಾಸಕರ ಭವನದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಭಾಗವಹಿಸಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ ಹಾಗೂ ಸರಳತೆಯ ಸಂದೇಶ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪ್ರಾಮಾಣಿಕತೆ, ಸರಳತೆ ಹಾಗೂ ದೇಶಸೇವೆಯ ಆದರ್ಶಗಳು ಪ್ರತಿಯೊಬ್ಬರಿಗೂ ಸದಾ ಪ್ರೇರಣೆಯಾಗಿವೆ ಎಂದು ಹೇಳಿದರು.
ಮಹನೀಯರು ಸಾರಿದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಸಚಿವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading