October 2, 2026
IMG20261002105042_01

oplus_0


ಚಳ್ಳಕೆರೆ: ಮಹಾತ್ಮ ಗಾಂಧೀಜಿಯವರ ಆಚಾರ-ವಿಚಾರ, ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಮತ್ತು ದೇಶಕ್ಕಾಗಿ ಕೆಲಸ ಮಾಡಿದಾಗ ಮಾತ್ರ ಗಾಂಧೀ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಅಹಿಂಸಾ ನೀತಿ ವಿಶ್ವದಲ್ಲೇ ಖ್ಯಾತಿ ಪಡೆದಿದೆ. ಅವರ ತತ್ವ, ಆದರ್ಶಗಳು ಇಂದಿನ ಪೀಳಿಗೆಗೆ ಸದಾ ಪ್ರೇರಣೆಯಾಗಿದ್ದು, ಯುವಜನರು ಗಾಂಧೀಜಿಯವರ ಜೀವನ ಹಾಗೂ ಅವರ ಕೃತಿಗಳನ್ನು ಓದುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು.
ದೇಶದ ಅಭಿವೃದ್ಧಿಗಾಗಿ ಗಾಂಧೀಜಿಯವರು ಹಲವು ಮಹತ್ವದ ಚಿಂತನೆಗಳನ್ನು ನೀಡಿದ್ದರು. ಗ್ರಾಮಗಳ ಅಭಿವೃದ್ಧಿ ಹಾಗೂ ಗ್ರಾಮೀಣ ಜನರ ಸ್ವಾವಲಂಬನೆ ಅವರ ಪ್ರಮುಖ ಕನಸುಗಳಲ್ಲಿ ಒಂದಾಗಿತ್ತು. ಗಾಂಧೀಜಿಯವರ ಆದರ್ಶಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading