ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕಹನಸೋಗೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ ಶ್ರೀಪತಿಯವರನ್ನು ಬೇರೆಡೆಗೆ ವರ್ಗಾಯಿಸಬೇಕೆಂದು ಒತ್ತಾಯಿಸಿ ಚಿಕ್ಕಹನಸೋಗೆ ಗ್ರಾಮಸ್ಥರುಗಳು ಗ್ರೇಡ್ 2 ತಹಶೀಲ್ದಾರ್
ಸಣ್ಣರಾಮಪ್ಪ ಅವರಿಗೆ ಮನವಿ ಸಲ್ಲಿಸಿದರು.



ಜಲಜಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸುಮಾರು 40 ಲಕ್ಷ ರೂಗಳ ವೆಚ್ಚದಲ್ಲಿ ಹಾಗೂ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯವನ್ನು ಸುಮಾರು 30 ಲಕ್ಷ ರೂಗಳ ವೆಚ್ಚದಲ್ಲಿ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ನಿರ್ಮಿಸಿದ್ದೇವೆ. ಈ ದೇವಸ್ಥಾನದಲ್ಲಿ ಕಳೆದ ಆರು ವರ್ಷಗಳಿಂದ ಅರ್ಚಕರಾಗಿ ಶ್ರೀಪತಿಯವರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರು ದೇವಸ್ಥಾನದ ಕಾರ್ಯಗಳನ್ನು ಸರಿಯಾಗಿ ಮಾಡುತ್ತಿಲ್ಲ, ಗ್ರಾಮಸ್ಥರು ಹಾಗೂ ಗ್ರಾಮದ ಯಜಮಾನರುಗಳಿಗೆ ಸರಿಯಾಗಿ ಸ್ಪಂದಿಸದೆ ಗ್ರಾಮಸ್ಥರುಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಗ್ರಾಮದ ದೇವಾಲಯದಲ್ಲಿ ಪೂಜಾ ಕಾರ್ಯಗಳಿಗೆ ತೊಂದರೆ ಉಂಟಾಗುತ್ತಿದ್ದು ಕೂಡಲೇ ಅರ್ಚಕ ಶ್ರೀಪತಿಯವರನ್ನು ಬೇರೆಡೆಗೆ ವರ್ಗಾಯಿಸಿ ಬೇರೆ ಅರ್ಚಕರನ್ನು ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ನೇಮಕ ಮಾಡಿಕೊಡಬೇಕೆಂದು
ಚಿಕ್ಕಹನಸೋಗೆ ಗ್ರಾಮಸ್ಥರುಗಳು ತಾಲೂಕು ದಂಡಾಧಿಕಾರಿಗಳನ್ನು ಒತ್ತಾಯಿಸಿದರು.
ಗ್ರೇಡ್ 2 ತಹಶೀಲ್ದಾರ್ ಸಣ್ಣರಾಮಪ್ಪ ಮನವಿಯನ್ನು ಸ್ವೀಕರಿಸಿ ಮಾತನಾಡಿ ಗ್ರಾಮಸ್ಥರು ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಅವರ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರುಗಳಾದ ನಾರಾಯಣಗೌಡ, ಚಂದ್ರೇಗೌಡ, ಜವರೇಗೌಡ, ರಮೇಶ, ವಾಸುದೇವ, ಚಂದ್ರಪ್ಪ, ಕೃಷ್ಣೇಗೌಡ, ಪುಟ್ಟರಾಜು, ಗಿರೀಶ, ಮಹದೇವ್, ಶ್ರೀಧರ, ಚಂದ್ರೇಗೌಡ, ಪುಟ್ಟೇಗೌಡ, ಚಂದ್ರೇಗೌಡ, ರಾಘವೇಂದ್ರ, ಮರಿಯ, ನಾಗೇಗೌಡ, ಪುಟ್ಟಸ್ವಾಮಿ, ಗ್ರಾ.ಪಂ. ಉಪಾಧ್ಯಕ್ಷ ದೊರೆ, ಸದಸ್ಯ ಲೋಕೇಶ್, ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.