ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆಂದು ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್ ಹೇಳಿದರು.
ಅವರು ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡಬೇಕು ಎಂಬ ಹಲವು ವರ್ಷಗಳ ಜನತೆಯ ಬೇಡಿಕೆಯ ಬಗ್ಗೆ ಅತ್ಯಂತ
ಕಾಳಜಿವಹಿಸಿ ಶ್ರಮಿಸುವ ಮೂಲಕ ಅದು ಸಾಕಾರಗೊಳ್ಳಲು ಪ್ರಮುಖ ಕಾರಣಕರ್ತರಾದ ಶಾಸಕರಾದ
ಡಿ.ರವಿಶಂಕರ್ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು. ಇದರಿಂದಾಗಿ ಸಾಲಿಗ್ರಾಮ ಪಟ್ಟಣಕ್ಕೆ ಹೆಚ್ಚಿನ ಅನುದಾನವು ಬರಲಿದ್ದು ಆ ಮೂಲಕ ಪಟ್ಟಣದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್ ಮಾತನಾಡಿ ಸಾಲಿಗ್ರಾಮ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರುವ ಮೂಲಕ ಮತ್ತೊಂದು ಮುನ್ನುಡಿ ಬರೆದಿದ್ದು. ಸರ್ಕಾರದಿಂದ ಅನುದಾನವು ಕೂಡ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬರಲಿದ್ದು ಅದರ ಮೂಲಕ ಸಾಲಿಗ್ರಾಮ ಪಟ್ಟಣವು ಅಭಿವೃದ್ಧಿಯ ಪಥದತ್ತ ಸಾಗಲಿದೆ ಇಂತಹ ಕಾರ್ಯಕ್ಕೆ ಪರಿಶ್ರಮ ಹಾಕಿದ ಕ್ಷೇತ್ರದ ಶಾಸಕರಾದ ಡಿ.ರವಿಶಂಕರ್ ಅವರಿಗೆ ಪಟ್ಟಣದ ಜನತೆಯ ಪರವಾಗಿ ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ
ಎಸ್.ಎಸ್.ಹೇಮಂತ್ ಕುಮಾರ್ ಮಾತನಾಡಿ ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ, ಉಪಮುಖ್ಯಮಂತ್ರಿಗಳಾದ
ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ಇದಕ್ಕೆ ಶ್ರಮಿಸಿದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ರವಿಶಂಕರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.
ಸಾಲಿಗ್ರಾಮ ಗ್ರಾಮ ಪಂಚಾಯಿತಿಗೆ ಬರುತ್ತಿದ್ದ ಅನುದಾನ ಬಹಳ ಕಡಿಮೆ ಇದ್ದ ಕಾರಣದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಹಣದ ಸಮಸ್ಯೆ ಇತ್ತು. ಈಗ ಸಾಲಿಗ್ರಾಮ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡುವ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿ ಆಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುವರ್ಣ, ಮುಖಂಡ ವೆಂಕಟೇಶ್ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.