December 14, 2025
IMG-20251121-WA0338.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯ ಅನಾವರಣವನ್ನು ಮಾಡಬೇಕು ಎಂದು ಕರ್ಪೂರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಸ್ವಾಮಿ ಹೇಳಿದರು.

ಅವರು ತಾಲೂಕಿನ ರಾಂಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಕೆ.ಆರ್.ನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಾಧಿಕಾರಿಗಳ ಕಾರ್ಯಾಲಯ ಇವರುಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಾಲಿಗ್ರಾಮ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೋಷಕರು ಮತ್ತು ಶಿಕ್ಷಕರುಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಒಂದೊಂದು ಮಕ್ಕಳಲ್ಲೂ ಕೂಡ ಒಂದೊಂದು ರೀತಿಯ ಪ್ರತಿಭೆಗಳು ಇರುತ್ತವೆ. ಅವರು ಅದನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆ ಅವಶ್ಯಕವಾಗಿದ್ದು. ಅದನ್ನು ಶಿಕ್ಷಣ ಇಲಾಖೆಯು ಕಲ್ಪಿಸಿ ಕೊಡುತ್ತಿರುವುದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯ ರಾಂಪುರ ಲೋಕೇಶ್ ಮಾತನಾಡಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದರು. ಶಾಲೆಗಳಲ್ಲಿ ನಡೆಯುವ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇಂತಹ ಸಂದರ್ಭದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆಯುವ ಮೂಲಕ ತಮ್ಮ ಗುರಿ ಸಾಧನೆಯನ್ನು ಮಾಡಬೇಕು. ಆ ಮೂಲಕ ಕಲಿತ ಶಾಲೆಗೆ, ಹೆತ್ತವರಿಗೆ ಹಾಗೂ ಕಲಿಸಿದ ಗುರುಗಳಿಗೆ ಕೀರ್ತಿಯನ್ನು ತರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹರ್ಷವರ್ಧನ, ಪಿಡಿಓ ಭಾಸ್ಕರ್, ಶಿಕ್ಷಣ ಸಂಯೋಜಕಿ ಕುಸುಮ, ಎನ್‌ಪಿಎಸ್ ತಾಲೂಕು ಅಧ್ಯಕ್ಷ ಮಂಜುನಾಥ್, ಪ್ರಾಂಶುಪಾಲ ಮರಯ್ಯ, ಸಕ್ಕರೆ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಸುರೇಶ್, ಮುಖ್ಯ ಶಿಕ್ಷಕ ಜಗದೀಶ್, ಮುಖಂಡ ದಡದಹಳ್ಳಿಸ್ವಾಮಿ, ಶಿಕ್ಷಕರಾದ ಮಧು, ಲಕ್ಷ್ಮಣ, ಭವಾನಿ, ರವಿಪ್ರಕಾಶ್, ಕುಮಾರ, ಭೂಮಿಕ, ನೇತ್ರ, ಮಂಜು, ಯೋಗೇಶ್, ಶಿವಶಂಕರ್, ಅಶೋಕ್, ಪ್ರಕಾಶ್, ವಿವಿಧ ಶಾಲೆಗಳ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading