December 14, 2025
1764685565659.jpg

ಹಿರಿಯೂರು :
ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗಿ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದು, ಇಂತಹ ದುಷ್ಚಟಗಳಿಗೆ ಯುವಪೀಳಿಗೆ ಬಲಿಯಾಗದೇ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಮಾಡಬೇಕು ಎಂಬುದಾಗಿ ಮರಡಿಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ಡಾ.ಚೈತ್ರ ಹೇಳಿದರು.
ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಐಮಂಗಲ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯು ಕ್ಯಾನ್ಸರ್, ಹೃದಯಾಘಾತದಂತಹ ಮಾರಕ ರೋಗಗಳಿಗೆ ಕಾರಣವಾಗಲಿದ್ದು, ಯುವಜನತೆ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ, ವಿದ್ಯಾರ್ಥಿಗಳು ಉತ್ತಮ ಆಹಾರ ಸೇವನೆ, ಪ್ರತಿನಿತ್ಯ ವ್ಯಾಯಾಮ, ವಾಯುವಿಹಾರ ಹೀಗೆ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಾಂಶುಪಾಲರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ ರಮೇಶ್, ಸಮುದಾಯ ಆರೋಗ್ಯ ಕೇಂದ್ರ ಮರಡಿಹಳ್ಳಿಯ ಆಡಳಿತ ವೈದ್ಯಾಧಿಕಾರಿ ಶ್ರೀಮತಿ ಡಾ.ಚೈತ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಐಮಂಗಲದ ಆಡಳಿತ ವೈದ್ಯ ಅಧಿಕಾರಿ ಡಾ.ಸಿ.ವಿಜಯ್, ಹಾಗೂ ಐಮಂಗಲ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅಮಿತ್ ಹಾಗೂ ಕೃಷ್ಣ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading