ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಕೆ.ನಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಎಂ.ಕೆ.ನಟರಾಜು ನಾಮಪತ್ರ ಸಲ್ಲಿಸಿದ್ದು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಎಂ.ಕೆ.ನಟರಾಜು ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಇಲಾಖೆಯ ರವಿ ಅವರು ಅಧಿಕೃತವಾಗಿ ಘೋಷಣೆ ಮಾಡಿದರು.
ಚುನಾವಣೆ ಪ್ರಕ್ರಿಯೆಯಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣಶೆಟ್ಟಿ, ನಿರ್ದೇಶಕರುಗಳಾದ ಭಾಸ್ಕರ,
ಆರ್.ರಂಗಸ್ವಾಮಿ, ಎಂ.ಕೆ.ಕಿರಣ್ ಕುಮಾರ್, ಎಂ.ಕೆ.ನಟರಾಜು, ಬೈರಾಜಿ, ಪಾಪನಾಯಕ,
ಎಂ.ವಿ.ರಮೇಶ, ಎಂ.ಬಿ.ಕಮಲಮ್ಮ, ಸುಶೀಲಮ್ಮ, ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಬಸವರಾಜು, ಸಂಘದ ಸಿಇಒ ಮಂಜುನಾಥ್ ಪಾಲ್ಗೊಂಡಿದ್ದರು.
ನೂತನ ಅಧ್ಯಕ್ಷ ಎಂ.ಕೆ.ನಟರಾಜು ಮಾತನಾಡಿ ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲು ಮಾಜಿ ಸಚಿವ ಸಾ.ರಾ.ಮಹೇಶ್, ಸಂಘದ ನಿರ್ದೇಶಕರುಗಳು ಮತ್ತು ಗ್ರಾಮದ ಮುಖಂಡರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಎಲ್ಲರ ಸಲಹೆ, ಸಹಕಾರ ಮಾರ್ಗದರ್ಶನದಲ್ಲಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಸಂಘದ ನೂತನ ಅಧ್ಯಕ್ಷ ಎಂ.ಕೆ.ನಟರಾಜು ಅವರನ್ನು ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗ, ಜನಪ್ರತಿನಿಧಿಗಳು, ವಿವಿಧ ಮುಖಂಡರುಗಳು ಅಭಿನಂದಿಸಿದರು.
ನೂತನ ಅಧ್ಯಕ್ಷರ ಬೆಂಬಲಿಗರು ಸಿಹಿ ವಿತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಬಾಲು, ಮುಖಂಡರುಗಳಾದ ರಾಧಾಕೃಷ್ಣ, ಎಂ.ಆರ್.ಕೆಂಪೇಗೌಡ, ಪ್ರಕಾಶ್, ಎಂ.ಆರ್.ನಾಗೇಶ್, ಕಾಂತರಾಜು, ಕೃಷ್ಣಪ್ಪ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.