ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ಬನದ ಹುಣ್ಣಿಮೆ ಮಹೋತ್ಸವ ವೈಭವ
ಹೊಸದುರ್ಗ ಪಟ್ಟಣದ ಕೋಟೆ ಬನಶಂಕರಿ ದೇವಿ ದೇವಸ್ಥಾನ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶನಿವಾರ ಬನದ ಹುಣ್ಣಿಮೆ ಮಹೋತ್ಸವ ಭಕ್ತಿಭಾವದಿಂದ ವಿಜೃಂಭಣೆಯಿಂದ ನಡೆಯಿತು. ಕೋಟೆ ಬನಶಂಕರಿ ದೇವಾಲಯವನ್ನು ಹೂವು, ಹಸಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಪಂಚಾಮೃತ ಅಭಿಷೇಕ, ಹೋಮ-ಹವನ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಸಂಜೆ ಅಲಂಕೃತ ಪಲ್ಲಕ್ಕಿಯಲ್ಲಿ ದೇವಿಯ ಉತ್ಸವ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಇತಿಹಾಸ ಪ್ರಸಿದ್ಧ ಸಣ್ಣಕ್ಕಿ ಬಾಗೂರು ಹಾಗೂ ಮತ್ತೋಡು ಗ್ರಾಮಗಳಲ್ಲಿ ಬನಶಂಕರಿದೇವಿ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಭಕ್ತರು ತೇರನ್ನು ಭಕ್ತಿಯಿಂದ ಎಳೆದು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ತಾಲೂಕಿನ ನೀರಗುಂದ, ದೊಡ್ಡತೇಕಲವಟ್ಟಿ, ಬೆಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಬನದ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.