ಹಿರಿಯೂರು: ಧರ್ಮಪುರ ಗ್ರಾಮಪಂಚಾಯಿತಿಗೆ ಜಿಲ್ಲಾ ಪಂಚಾಯತ್ ಸಿಇಒ ಡಾ. ಆಕಾಶ್ ಎಸ್ ಅನಿರೀಕ್ಷಿತ ಭೇಟಿ
ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಎಸ್ ಅವರು ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮಪಂಚಾಯಿತಿಗೆ ಅನಿರೀಕ್ಷಿತ ಭೇಟಿ ನೀಡಿ, ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ವೇಳೆ ಗ್ರಾಮಪಂಚಾಯತಿಯ ದಾಖಲಾತಿಗಳನ್ನು ಸವಿಸ್ತಾರವಾಗಿ ಪರಿಶೀಲಿಸಿದ ಅವರು, ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿ ಕುರಿತು ಪಿಡಿಒ ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ
ತೆವಳಿಕೊಂಡು ಬರುತ್ತಿದ್ದ ವಿಶೇಷ ಚೇತನ ವ್ಯಕ್ತಿಯೊಂದಿಗೆ ನೆಲದ ಮೇಲೆ ಕೂತು ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿದರು. ಅವರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಪಿಡಿಒ ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ನಂತರ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಕಸ ಸಂಗ್ರಹಣೆ ಹಾಗೂ ನಿರ್ವಹಣೆ ಕುರಿತಂತೆ ಮಾಹಿತಿ ಪಡೆದರು.



ಹಾಗೆಯೇ CDD INDIA ಸ್ವಯಂ ಸೇವಾ ಸಂಘದ ಮುಖ್ಯಸ್ಥರಾದ ರೋಹಿಣಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಬೂದು ನೀರಿನ ನಿರ್ವಹಣಾ ಘಟಕ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಪಂಚಾಯತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.