June 3, 2026
IMG-20260603-WA0176.jpg

ಹೊಸದುರ್ಗ, ಜೂನ್ 3: ಪಟ್ಟಣದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಎನ್. ನಾಗಭೂಷಣ್ ಹೇಳಿದರು.
ಪಟ್ಟಣದ ಕೋಟೆ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
“ಆರೋಗ್ಯವಂತರಾಗಿ ಬದುಕಬೇಕಾದರೆ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪಟ್ಟಣದ ಎಲ್ಲಾ ಬಡಾವಣೆಗಳು ಮತ್ತು ಬೀದಿಗಳು ಸ್ವಚ್ಛತೆಯಿಂದ ಕೂಡಿರಲು ಸಾರ್ವಜನಿಕರ ಸಹಕಾರ ಅಗತ್ಯ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು ಅವರು ಮನವಿ ಮಾಡಿದರು.
ಪರಿಸರ ಅಭಿಯಂತರ ರವೀಂದ್ರನಾಥ್ ಅಂಗಡಿ ಮಾತನಾಡಿ, “ಕಸವನ್ನು ಅಸಮರ್ಪಕವಾಗಿ ವಿಲೇವಾರಿ ಮಾಡಿದರೆ ವಿಷಕಾರಿ ಅಂಶಗಳು ಉತ್ಪತ್ತಿಯಾಗಿ ದುರ್ವಾಸನೆ ಹರಡುವುದರ ಜೊತೆಗೆ ಸಾಂಕ್ರಾಮಿಕ ರೋಗಗಳಿಗೂ ಕಾರಣವಾಗಬಹುದು. ಪುರಸಭೆಯಿಂದ ಪ್ರತಿದಿನ ಮನೆ ಬಾಗಿಲಿಗೆ ಕಸದ ವಾಹನ ಬರುತ್ತಿದ್ದು, ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.
ಜಾಗೃತಿ ಜಾಥಾದಲ್ಲಿ “ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ”, “ಕಸ ವಿಂಗಡಣೆ ನಮ್ಮೆಲ್ಲರ ಜವಾಬ್ದಾರಿ”, “ಕಸ ವಿಂಗಡಿಸಿ ಕಸದ ಗಾಡಿಗೆ ಹಾಕಿ, ರೋಗಮುಕ್ತ ಸಮಾಜಕ್ಕೆ ಕೈಜೋಡಿಸಿ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಬಸವರಾಜ್ ಹಾಗೂ ಪ್ರವೀಣ್ ಅವರು ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯಗಳ ವಿಂಗಡಣೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಮ್ಯೂನಿಟಿ ಮೊಬೈಲೈಸರ್‌ಗಳು, ಜನಪ್ರತಿನಿಧಿಗಳು, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ನಾಗತಿಹಳ್ಳಿ ಮಂಜುನಾಥ್

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading