June 3, 2026
FB_IMG_1780495896817.jpg

ಚಿತ್ರದುರ್ಗ :
ರಾಜ್ಯಾದ್ಯಂತ ಬಿ.ಎಸ್.ಸಿ.ಎ.ಜಿ ಪರೀಕ್ಷೆಗಳು ನಡೆದು, ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದ್ದು, ಬಬ್ಬೂರುಫಾರಂನಲ್ಲಿ ಮಾತ್ರ 2 ನೇ ಬಾರಿ ಪರೀಕ್ಷೆ ಮಾಡಲಾಗಿದ್ದು, ಇದರಿಂದ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಈ ಕೂಡಲೇ 2 ನೇ ಪರೀಕ್ಷೆಯನ್ನು ರದ್ದು ಪಡಿಸಿ, ಮೊದಲ ಪರೀಕ್ಷೆ ಫಲಿತಾಂಶವನ್ನೇ ಗಣನೆಗೆ ತೆಗೆದುಕೊಳ್ಳಬೇಕು ಎಂಬುದಾಗಿ ರಾಜ್ಯ ರೈತಸಂಘದ ಮುಖಂಡರಾದ ಕೆ.ಪಿ.ಭೂತಯ್ಯ ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಬಬ್ಬೂರು ಫಾರಂನಲ್ಲಿ ನಡೆದ 2 ನೇ ಬಿ.ಎಸ್.ಸಿ.ಎ.ಜಿ ಪರೀಕ್ಷೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ, ಜಿಲ್ಲಾಧಿಕಾರಿಗಳಿಗೆ ಹಾಗೂ ಎ.ಡಿ.ಸಿ.ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಬಬ್ಬೂರು ಫಾರಂನಲ್ಲಿ ನಡೆದ 2 ನೇ ಬಿ.ಎಸ್.ಸಿ.ಎ.ಜಿ ಪರೀಕ್ಷೆಯನ್ನು ಈ ಕೂಡಲೇ ರದ್ದು ಪಡಿಸದಿದ್ದರೆ, ಸೋಮವಾರದಂದು ಸುಮಾರು 5 ಸಾವಿರಕ್ಕೂ ಹೆಚ್ಚು ರೈತಪರ ಸಂಘಟನೆಗಳು ಬಬ್ಬೂರು ಫಾರಂ ಕೃಷಿ ವಿಶ್ವವಿದ್ಯಾಲಯವನ್ನು ಬಂದ್ ಮಾಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂಬುದಾಗಿ ಎಚ್ಚರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ವೆಂಕಟೇಶ್ ರವರು ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಿವಮೊಗ್ಗ ಕೆಳದಿ ಶಿವಪ್ಪನಾಯಕ ತೋಟಗಾರಿಕೆ ವಿಶ್ವವಿದ್ಯಾನಿಲಯದ ಕುಲಪತಿಗಳೊಂದಿಗೆ ಚರ್ಚಿಸಿ, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂಬುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಚಿತ್ರದುರ್ಗ ಗಾಂಧಿ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಕಾಲ್ನಡಿಗೆಯಲ್ಲಿ ಬಂದು ಮಾನವ ಸರಪಳಿ ನಿರ್ಮಿಸಿ, ಬಹಿರಂಗ ಸಭೆ ಮಾಡಿ, ಎ.ಡಿ.ಸಿ.ಕುಮಾರಸ್ವಾಮಿಯವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ರಾಜ್ಯ ರೈತಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಕೆ.ಸಿ.ಹೊರಕೇರಪ್ಪ, ಕೆ.ಟಿ.ತಿಪ್ಪೇಸ್ವಾಮಿ, ಮರಳಹಳ್ಳಿ ರವಿಕುಮಾರ್, ಬಸ್ತಿಹಳ್ಳಿ ಸುರೇಶ್ ಬಾಬು, ಬಿ.ಓ.ಶಿವಕುಮಾರ್, ಬಳಗಟ್ಟವೆಂಕಟೇಶ್ , ಚೇತನ್ ಯಳನಾಡು, ಆರ್.ಚಂದ್ರಪ್ಪ, ಜಿ.ನಾಗರಾಜು, ಕೆ.ಎಂ.ಕಾಂತರಾಜು, ಬಿ.ಎ.ಹನುಮಂತರೆಡ್ಡಿ, ಮುರುಳಿಯಾದವ್, ಮರಿಗೌಡ, ಮರಿಲಿಂಗಪ್ಪ, ಶಶಿಕಲಾ, ಬುರುಜನರೊಪ್ಪ ತಿಪ್ಪೇಸ್ವಾಮಿ, ನಾಗರಾಜು, ತಿಪ್ಪೇಶ್ ಸೇರಿದಂತೆ ಅನೇಕ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಪೋಷಕರು ಭಾಗವಹಿಸಿದ್ದರು.
ಫೊಟೋ ಇದೆ-01
———————————————————————————–

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading