September 15, 2025

ಹಿರಿಯೂರು ಅ.3 ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ಲ್ಲಿ ಗುರುವಾರ ಬೆಳ್ಳಂ ಬೆಳಗ್ಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರು ಕಡೆಯಿಂದ ದಾವಣಗೆರೆ ಕಡೆ ಹೋಗುವಾಗ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಅವರು ಇಂದು ಬೆಳಗ್ಗೆ 6 ಗಂಟೆ ವೇಳೆ ಕಾರು ಅಪಘತದಲ್ಲಿ ಮೃತಪಟ್ಟವರಾಗಿದ್ದು, ಇವರು ರಾಮನಗರ ಮೂಲದವರಾಗಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಮಗನಿಗೆ ಮೆಡಿಕಲ್ ಸೀಟ್ ಸಿಕ್ಕಿದ್ದರಿಂದ ಇಂದು ಅವರನ್ನು ದಾವಣಗೆರೆ ಕಾಲೇಜಿಗೆ ಬಿಟ್ಟು ಬರಲು ಬರುತ್ತಿದ್ದರು. ಆಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ತಂದೆ-ತಾಯಿ ಮಗನನ್ನು ದಾವಣಗೆರೆ ಶಾಲೆಯೊಂದರಲ್ಲಿ ಪ್ರವೇಶ ಕೊಡಿಸಲು ಹೋಗುತ್ತಿದ್ದು. ಈ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ಕಾರು ಚಾಲಕ ಅಂದರೆ ಮಗನ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ತಾಯಿ-ಮಗ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಪ್ರಕರಣ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗುತ್ತಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading