ಚಿತ್ರದುರ್ಗ ನ.03:
ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ 150 ನೇ ಜನ್ಮದಿನಾಚರಣೆ ಅಂಗವಾಗಿ ಏಕತೆಯ ಸಂದೇಶ ಸಾರಲು ನ. 12 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಹೊಳಲ್ಕೆರೆ ರಸ್ತೆಯ ಚಂದ್ರವಳ್ಳಿ ಆಟದ ಮೈದಾನದಿಂದ ನಗರದ ಚಳ್ಳಕೆರೆ ಗೇಟ್‍ವರೆಗೂ ಸರ್ದಾರ್ @150 ಏಕತಾ ನಡಿಗೆ ಆಂದೋಲನಾ ಏರ್ಪಡಿಸಲಾಗಿದ್ದು, ಏಕತಾ ನಡಿಗೆ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಸರ್ದಾರ್@150 ಏಕತಾ ನಡಿಗೆ ಆಂದೋಲನವನ್ನು ಏರ್ಪಡಿಸಲು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏಕತಾ ನಡಿಗೆ ನಡೆಯುವ ಮಾರ್ಗದಲ್ಲಿ ವಾಹನ ಸಂಚಾರ ಹಾಗೂ ಜನ ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಅಗತ್ಯವಿರುವ ಕಡೆ ಬ್ಯಾರಿಕೇಡ್ ನಿರ್ಮಿಸಬೇಕು. ನಗರಸಭೆಯಿಂದ ಕುಡಿಯುವ ನೀರು ಹಾಗೂ ವಾಟರ್ ಟ್ಯಾಂಕ್, ಕಸದ ಗಾಡಿ ಮತ್ತು ಸ್ವಚ್ಛತೆಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದಲ್ಲಿ ನ. 12 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಚಂದ್ರವಳ್ಳಿ ಮೈದಾನದಿಂದ ಚಳ್ಳಕೆರೆ ಗೇಟ್‍ವರೆಗೂ ಹಮ್ಮಿಕೊಂಡಿರುವ ಏಕತಾ ನಡಿಗೆ ಅಂದೋಲನದಲ್ಲಿ ಮೈ ಭಾರತ್ ಸ್ವಯಂ ಸೇವಕರು, ಎನ್.ಸಿ.ಸಿ ಕೆಡೆಟ್‍ಗಳು, ಎನ್‍ಎಸ್‍ಎಸ್ ಸ್ವಯಂ ಸೇವಕರು, ಕ್ರೀಡಾಪಟಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲ ನಾಗರಿಕರು ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೇರಾ ಯುವ ಭಾರತ್‍ನ ಎಂ.ರಮೇಶ್ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.