
ಹೊಸದುರ್ಗ:ತಾಲೂಕಿನ ಶಾಲೆ ಕಾಲೇಜುಗಳ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.
ಅವರು ತಾಲೂಕಿನ ಕಸಬಾ ಹೋಬಳಿ ಕ್ಯಾದಿಗೆರೆ ಗ್ರಾಮದ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಗುತ್ತಿಕಟ್ಟೆ ಲಂಬಾಣಿಹಟ್ಟಿ, ಕ್ಯಾದಿಗೆರೆ, ಆನಿವಾಳ ಗ್ರಾಮದ ಸ.ಹಿ.ಪ್ರಾ.ಶಾಲೆಗಳಿಗೆ ನೂತನ ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಕೆಲ್ಲೋಡು ಮತ್ತು ಕುರುಬರಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಕೊಡುವ ಯೋಜನೆಯ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸೀನ್ ಮಾತನಾಡಿ ಶಾಸಕರ ನೇತೃತ್ವದಲ್ಲಿ ಶಾಲೆಗಳಿಗೆ ಅಗತ್ಯವಿರುವ ನೂತನ ಕೊಠಡಿ, ಹಾಗು ದುರಸ್ತಿ ಶಾಲೆಗಳನ್ನು ಗುರುತಿಸಲಾಗಿದೆ, ಹಲವು ಶಾಲೆಗಳಿಗೆ ಪೀಠೋಪಕರಣ ಹಾಗು ಪಾಠೋಪಕರಣ ಒದಗಿಸಲಾಗಿದೆ ಎಂದರು. ಕೆಲ್ಲೋಡು ಮುಖಂಡರುಗಳು, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಹಾಗೂ ಗ್ರಾಮಸ್ಥರುಗಳು ಹಾಜರಿದ್ದರು.