ಚಳ್ಳಕೆರೆ: ಕಳೆದ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ನನಗೆ ವೈಯಕ್ತಿಕವಾಗಿ ತೃಪ್ತಿ ತಂದಿಲ್ಲ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕೌಟುಂಬಿಕ ವ್ಯವಸ್ಥೆಯನ್ನು ದೂರದೆ ಸ್ವ ಪರಿಶ್ರಮದಿಂದ ಅಭ್ಯಾಸ ನಡೆಸಿ ಕಾಲೇಜು ಹಾಗು ತಾಲೂಕಿಗೆ ಉತ್ತಮ ಫಲಿತಾಂಶ ತರುವಂತಾಗಬೇಕು ಎಂದು ಶಾಸಕ ಟಿ ರಘುಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.




ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ, ಸಾಂಸ್ಕೃತಿಕ, ಎನ್ಎಸ್ಎಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಮಾರೋಪ ಸಮಾರಂಭ 2024-25ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಘಟ್ಟಗಳು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮಹತ್ವದ ಘಟ್ಟವಾಗಿದೆ ಇನ್ನು ಕೇವಲ ಎರಡು ತಿಂಗಳಗಳಲ್ಲಿ ಮುಖ್ಯ ಪರೀಕ್ಷೆ ಎದುರಿಸಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳಿಂದ ಹೊರಬಂದು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದರೆ ಮುಂದೆ ತಮ್ಮ ಜೀವನ ರೂಪಿಸಿಕೊಳ್ಳಲು ಅಡಿಪಾಯ ಹಾಕಿದಂತಾಗುತ್ತದೆ ಹೆಚ್ಚು ಅಂಕಗಳಿಸುವುದರಿಂದ ತಮ್ಮ ಪೋಷಕರಿಗೆ ಕಾಲೇಜಿಗೆ ಹಾಗೂ ತಾಲೂಕಿಗೆ ಉತ್ತಮ ಹೆಸರು ತರಲು ಸಾಧ್ಯವಾಗುತ್ತದೆ ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಹಾಗೂ ಸಾಮಾಜಿಕವಾಗಿ ಆರ್ಥಿಕವಾಗಿ ಪ್ರಗತಿ ಹೊಂದಲು ಶಿಕ್ಷಣ ಅತ್ಯಂತ ಸಹಕಾರಿಯಾಗಲಿದ್ದು ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತಂದು ಉತ್ತಮ ತರಬೇತಿ ಮೂಲಕ ಪೋಷಣೆ ಮಾಡಿದರೆ ರಾಜ್ಯದಲ್ಲಿ ತಾಲೂಕಿನ ಕೀರ್ತಿ ಪತಾಕೆ ಹಾರಿಸಲು ಸಹಕಾರಿಯಾಗಲಿದೆ ಕಾಲೇಜಿಗೆ ಕುಡಿಯುವ ನೀರಿನ ವ್ಯವಸ್ಥೆ ಸಭಾಂಗಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು.
ಸಾಹಿತಿ ತಿಪ್ಪಣ್ಣ ಮರಿಕುಂಟೆ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತ್ಯಂತ ಉತ್ತಮ ಪ್ರತಿಭೆಗಳನ್ನು ಹೊಂದಿರುತ್ತಾರೆ ಪಟ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಹೊರ ತರಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಸಾಧ್ಯವಾಗಿರುವುದಿಲ್ಲ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ರೂಪಿಸಿರುವುದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಪೋಷಕರು ಕಷ್ಟಪಟ್ಟು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ ಇದನ್ನು ಅರಿತು ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವತ್ತ ಗಮನ ಹರಿಸಬೇಕು
ಶಿಕ್ಷಣ ಪಡೆದ ಕೂಡಲೇ ಸರ್ಕಾರಿ ಕೆಲಸಕ್ಕಾಗಿ ಕಾಯದೆ ಸ್ವಯಂ ಉದ್ಯೋಗದ ಮೂಲಕ ಭವಿಷ್ಯ ರೂಪಿಸಿಕೊಳ್ಳುವತ್ತ ವಿದ್ಯಾರ್ಥಿಗಳು ಮನಸ್ಸು ಮಾಡಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಕೆ ತಿಮ್ಮಯ್ಯ ಮಾತನಾಡಿ ಕಾಲೇಜಿನ ಮೂರು ವಿಭಾಗಗಳಲ್ಲಿ 1125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ವಿಶೇಷ ತರಗತಿಗಳನ್ನು ನಡೆಸುತ್ತಿದ್ದು ಸಿಇಟಿ ಹಾಗೂ ನೀಟ್ ತರಬೇತಿಗೆ ವಿಶೇಷ ಆಸಕ್ತಿ ವಹಿಸಿ ತರಬೇತಿ ನೀಡಲಾಗುತ್ತಿದೆ ಕಳೆದ ವರ್ಷ 67.18ರಷ್ಟು ಫಲಿತಾಂಶ ಬಂದಿತ್ತು ಈ ಬಾರಿ ಇದನ್ನು ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಕಾಲೇಜಿಗೆ ಕುಡಿಯುವ ನೀರು ಹಾಗೂ ಸಭಾಂಗಣ ನಿರ್ಮಿಸುವಂತೆ ವಿನಂತಿ ಮಾಡಿದರು.
ಕಾರ್ಯಕ್ರಮದಲ್ಲಿ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಕಾರ್ಯಕ್ರಮಗಳಲ್ಲಿ ತಾಲೂಕು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕರಿಗೆ ಹಾಗೂ ಸಾಹಿತಿ ಪಗಡಲಬಂಡೆ ನಾಗೇಂದ್ರಪ್ಪರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೆ ತಿಮ್ಮಯ್ಯ ನಗರಸಭೆ ಅಧ್ಯಕ್ಷೆ ಜೈ ತುನ್ ಬೀ ಉಪಾಧ್ಯಕ್ಷೆ ಸುಮಾ ನಗರಸಭೆ ಸದಸ್ಯರಾದ ರಮೇಶ್ ಗೌಡ ಎಂ ಜೆ ರಾಘವೇಂದ್ರ ಕವಿತಾ ವೀರೇಶ್ ಆರ್ ಪುಟ್ಟಸ್ವಾಮಿ ಸಿಟಿ ವೀರೇಶ್ ಎಂ ಶ್ರೀನಿವಾಸ್ ಶಶಿಕಲಾ ಸುರೇಶ ಬಾಬು ಗದ್ದಿಗೆ ತಿಪ್ಪೇಸ್ವಾಮಿ ಫರೀದ್ ಖಾನ್ ಟಿ ರುದ್ರಮುನಿ ಎಸ್ ಕೋಣಪ್ಪ ಸೇರಿದಂತೆ ಕಾಲೇಜಿನ ವಿವಿಧ ಘಟಕಗಳ ಮುಖ್ಯಸ್ಥರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.