ಚಳ್ಳಕೆರೆ:
ಬಾಲ್ಯ ವಿವಾಹ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿತ್ರದುರ್ಗ, ತಾಲ್ಲೂಕು ಪಂಚಾಯತ್ ಚಳ್ಳಕೆರೆ, ತಾಲ್ಲೂಕು ಆಡಳಿತ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತು ಕಾನೂನು ಅರಿವು–ನೆರವು ಕಾರ್ಯಕ್ರಮವನ್ನು ಪರಶುರಾಂಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು.








ಕಾರ್ಯಕ್ರಮವನ್ನು ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖ್ ಉದ್ಘಾಟಿಸಿ ಮಾತನಾಡಿ, ಬಾಲ್ಯ ವಿವಾಹವು ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದ್ದು, ಇದನ್ನು ತಡೆಗಟ್ಟಲು ಕಾನೂನು ಅರಿವು ಅತ್ಯಗತ್ಯ ಎಂದು ತಿಳಿಸಿದರು. ಸಮಾಜದ ಪ್ರತಿಯೊಬ್ಬರೂ ಬಾಲ್ಯ ವಿವಾಹ ವಿರೋಧಿಸುವಲ್ಲಿ ಸಕ್ರಿಯರಾಗಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಶಶಿಧರ್ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿತ್ರದುರ್ಗದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶ ಹಾಗೂ ಉಚಿತ ಕಾನೂನು ಸಲಹಾ ಕೇಂದ್ರದ ಮಹತ್ವದ ಬಗ್ಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಶಮೀ ಪಿ. ನಂದ್ಯಾಲ್, ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಹೇಮ ಹೆಚ್.ಆರ್., ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ಶ್ರೀ ಪುನೀತ್ ಬಿ.ಆರ್. ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶಿವಕುಮಾರ್, ತಹಶೀಲ್ದಾರ್ ರೆಹಾನ್ ಪಾಷಾ, ಬಿಇಒ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕಾಶಿ, ಶಿಶು ಅಭಿವೃದ್ಧಿ ಅಧಿಕಾರಿ ರಾಜಾ ನಾಯ್ಕ, ಪಿಡಿಒ ಎ. ಗುಂಡಪ್ಪ, ಪಿಎಸ್ಐ ಮಾರುತಿ, ವಕೀಲರ ಸಂಘದ ಅಧ್ಯಕ್ಷ ಕೆ. ಸುರೇಶ್, ಉಪಾಧ್ಯಕ್ಷೆ ಬಿ.ಟಿ. ಶ್ಯಾಮಲ, ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಹಾಗೂ ಜಿ.ಆರ್. ಅಶ್ವತ್ಥನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು
About The Author
Discover more from JANADHWANI NEWS
Subscribe to get the latest posts sent to your email.