ಚಿತ್ರದುರ್ಗಫೆ.04:
ಮತದಾರರ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕಾರ್ಯ ಶೀಘ್ರದಲ್ಲಿ ಪ್ರಾರಂಭವಾಗುವುದರಿಂದ ಎಸ್‍ಐಆರ್ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಹೇಳಿದರು.
ನಗರದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸ್ವೀಪ್ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಸದಸ್ಯರನ್ನೊಳಗೊಂಡ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲಾ-ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಸಂಘ (ಇಎಲ್‍ಸಿ), ಮತಗಟ್ಟೆಗಳ ವ್ಯಾಪ್ತಿಯಲ್ಲಿ ಚುನಾವಣಾ ಜಾಗೃತಿ ಸಂಘ (ವಿಎಸಿ) ಹಾಗೂ ಎಲ್ಲ ಕಚೇರಿಗಳಲ್ಲಿ ಮತದಾರರ ಜಾಗೃತಿ ವೇದಿಕೆ (ವಿಎಎಫ್) ಗಳನ್ನು ಜಾಗೃತಗೊಳಿಸಿ, ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಮತದಾರರ ಸಾಕ್ಷರತಾ ಸಂಘಗಳ ಮಾಹಿತಿಯನ್ನು ಇಎಲ್‍ಸಿ ವೆಬ್‍ಸೈಟ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿ, ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ಹಮ್ಮಿಕೊಳ್ಳಲಾಗುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಅಪ್‍ಲೋಡ್ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮಾ, ಶಿರಸ್ತೆದಾರ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಅಧಿಕಾರಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.