March 4, 2026
HCjjKvNbgAAsIXg.jpg

ಚಿತ್ರದುರ್ಗ ಮಾರ್ಚ್ 04:
ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಮಹಿಳಾ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.
ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‍ಫೆÇೀಸಿಸ್ ಕ್ಯಾಂಪಸ್‍ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು.
ಆಸಕ್ತ ಪತ್ರಕರ್ತೆಯರು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.
ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ತಮ್ಮ ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.
ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು. ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‍ಸ್ಕಿಲ್ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು. ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
=============

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading