ನಿವೃತ್ತ ಯೋಧ ಸಿ.ಹೆಚ್. ನಾಗಭೂಷಣ ಅವರ ನಿವಾಸಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು.
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕೂನಬೇವು ಗ್ರಾಮದ ಶ್ರೀ ಸಿ.ಹೆಚ್. ನಾಗಭೂಷಣ ಅವರು ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಯೋಧರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ದೇಶ ಸೇವೆಯಲ್ಲಿ ದೀರ್ಘಕಾಲ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸಿದ ಅವರಿಗೆ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು.
ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಗಣ್ಯರು ಹಾಗೂ ಮುಖಂಡರು ನಾಗಭೂಷಣ ಅವರನ್ನು ಸನ್ಮಾನಿಸಿ ಗೌರವಿಸಿದರು. ದೇಶರಕ್ಷಣೆಗೆ ಸಲ್ಲಿಸಿದ ಅವರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಬುರೆಡ್ಡಿ, ಮಹಾಂತೇಶ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.