
ಹಿರಿಯೂರು:
ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದ ಹಿಂದೆ ಬಿದ್ದು ದುಶ್ಚಟಗಳಿಗೆ ಆಕರ್ಷಣೆಯಾಗದೆ ಮುಂದಿನ ಭವಿಷ್ಯದ ಗುರಿ ಇಟ್ಟುಕೊಂಡು ವಿದ್ಯಾಭ್ಯಾಸದ ಕಡೆಗೆಹೆಚ್ಚಿನ ಗಮನ ಹರಿಸಬೇಕು. ಉತ್ತಮ ಸಮಾಜವನ್ನು ರೂಪಿಸುವಲ್ಲಿ ಪೋಷಕರ, ಶಿಕ್ಷಕರ ಪಾತ್ರ ಮಹತ್ವದ್ದು ಎಂಬುದಾಗಿ ಹಿರಿಯೂರು ಪೊಲೀಸ್ ಉಪವಿಭಾಗದ ಡಿ.ವೈ.ಎಸ್ಪಿ. ಶಿವಕುಮಾರ್ ಅವರು ಹೇಳಿದರು.
ತಾಲ್ಲೂಕಿನ ಭೀಮನಬಂಡೆ ಸಮೀಪದ ಯಾಜ್ಞವಲ್ಕ್ಯ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಸ್ಥೆಯ ಮುಖ್ಯಸ್ಥರಾದ ಸುರೇಶ್ ಅವರು ಮಾತನಾಡಿ ಮಾದಕ ವಸ್ತುಗಳ ಸೇವನೆಯನ್ನು ತಡೆಗಟ್ಟುವ ಕ್ರಮಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಡಿ.ವೈಎಸ್ಪಿ ಶಿವಕುಮಾರ್ ಹಾಗೂ ಇನ್ಸ್ಪೆಕ್ಟರ್ ಆನಂದ್ ಇವರುಗಳಿಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯೂರು ಗ್ರಾಮಾಮತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಆನಂದ್, ಉಪನ್ಯಾಸಕರಾದ ವೇಣುಕುಮಾರ್, ಶ್ರೀಶನ್, ಹರ್ಷ, ಪ್ರವೀಣ್, ಶಿವಾನಂದ, ಸುಗುಣ, ಶಿಕ್ಷಕರಾದ ಮಲ್ಲಿಕಾರ್ಜುನ್, ರಾಕೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.