July 12, 2025
IMG-20250704-WA0102.jpg

ಚಳ್ಳಕೆರೆ ಜು.4

ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ಸರಕಾರಿ ಪ್ರೌಢಶಾಲೆಯ ಆವರದಲ್ಲಿ ಚುನಾವಣೆಯ ಕಾವು ಜೋರಾಗಿದ್ದು ವಿದ್ಯಾರ್ಥಿಗಳು ಮತಯಾಚನೆ ಸಾರ್ವರ್ತಿಕ ಚುನಾವಣೆ ನಾಚಿಸುವಂತಿತ್ತು.
ಡಿಜಿಟಲ್ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆಯ ಅರಿವು ಪಡೆದ ಮಕ್ಕಳು.

ಮತದಾನದ ಚೀಟಿಯ ಮೂಲಕ ಮತ ಚಲಾಯಿಸುವ ಪ್ರಕ್ರಿಯೆ ಈ ಹಿಂದೆ ಸಾರ್ವತ್ರಿಕ ಚುನಾವಣೆಯಲ್ಲಿಯೂ ನಡೆಯುತ್ತಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಚುನಾವಣಾ ಆಯೋಗವು ಇವಿಎಂ ಮಷೀನ್ ಗಳ ಮೂಲಕ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಂಡಿರುವುದನ್ನು ಗಮನಿಸಬಹುದಾಗಿದೆ. ಡಿಜಿಟಲ್ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಹಾಗೂ ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣಾ ಇವಿಎಂ ಮಾದರಿಯಲ್ಲಿಯೇ ಚುನಾವಣೆ ನಡೆಸುವ ಪ್ರಯತ್ನಕ್ಕೆ ತಾಲೂಕಿನ ಗಡಿಭಾಗದ ಸರ್ಕಾರಿ ಪ್ರೌಢಶಾಲೆಯ ಶಾಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಎಲ್ಲಾ ಪದಾಧಿಕಾರಿಗಳು ಮುಂದಾಗಿತ್ತು. 2025-26 ನೇ ಸಾಲಿನ ಶಾಲಾ ಸಂಸತ್ ನ ಮುಖ್ಯಮಂತ್ರಿ, ಕ್ರೀಡಾ ಮಂತ್ರಿ ಹಾಗೂ ಸಾಂಸ್ಕೃತಿಕ ಮಂತ್ರಿಗಳ ಆಯ್ಕೆ ಪ್ರಕ್ರಿಯೆಗಾಗಿ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ಸ್ಥಾನಕ್ಕೆ ಮೂವರು ಸ್ಪರ್ಧಿಗಳು ಸ್ಪರ್ಧೆಯಲ್ಲಿದ್ದರು. ಸುಮಾರು 150 ವಿದ್ಯಾರ್ಥಿಗಳು ಈ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಎಂಟನೇ ತರಗತಿ, ಒಂಬತ್ತನೇ ತರಗತಿ ಹಾಗೂ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಉತ್ಸಹದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಚುನಾವಣಾ ಪ್ರಕ್ರಿಯೆ ಯಾವ ರೀತಿಯಲ್ಲಿ ನಡೆಯಲಿದೆ ಎಂಬುದರ ಅರಿವನ್ನೂ ಪಡೆದರು.

ಡಿಜಿಟಲ್ ಮಾದರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸ್ಪರ್ಧಾಳುಗಳ ಭಾವಚಿತ್ರ ಸಹಿತ ಬೆಲೆಟ್ ಗಳು ಕಾಣುವಂತೆ ಮಾಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಗುರುತನ್ನು ಚಲಾಯಿಸಿದರು. ವಿದ್ಯಾರ್ಥಿಗಳ ಎಡಗೈ ತೋರು ಬೆರಳಿಗೆ ಚುನಾವಣಾ ಪ್ರಕ್ರಿಯೆ ನಡೆದ ಬಗ್ಗೆ ಶಾಯಿ ಹಚ್ಚುವುದರ ಮೂಲಕ ಹಾಗೂ ಮತದಾನ ಪ್ರಕ್ರಿಯೆಗೆ ಬಂದ ಸಂದರ್ಭದಲ್ಲಿ ಅವರ ದಾಖಲೆಗಳನ್ನು ಪರಿಶೀಲಿಸಿ, ಗುರುತು ಮಾಡಿಕೊಳ್ಳುವ ಮೂಲಕ ಸಾರ್ವತ್ರಿಕ ಚುನಾವಣಾ ಮಾದರಿಯನ್ನೇ ಪಾಲಿಸಲಾಗಿತ್ತು. ಸ್ಪರ್ಧಾಳುಗಳಿಗೆ ಕ್ಷಣ ಕ್ಷಣದ ಅಪ್ಡೇಟ್ ಲಭ್ಯವಾಗುವಂತೆ ಮಾಡಲಾಗಿತ್ತು. ಡಿಜಿಟಲ್ ಸ್ಕ್ರೀನ್ ಮೂಲಕ ವಿದ್ಯಾರ್ಥಿಗಳು ತಾವು ಪಡೆದ ಓಟುಗಳ ಲೆಕ್ಕವನ್ನು ಪರಿಶೀಲಿಸಿದರು.
ಶಿಕ್ಷ ಣ ಇಲಾಖೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿದೆ.

ಮುಖ್ಯ ಶಿಕ್ಷಕ ಹನುಮಂತಪ್ಪ .ಸಹ ಶಿಕ್ಷಕ
ನಾಗರಾಜ್ ಹಾಗೂ ಅತಿಥಿ ಶಿಕ್ಷಕರ ಸಹಭಾಗಿತ್ವದಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ನಡೆಸಲಾಯಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading