ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ ): ಗ್ರಾಮಗಳಲ್ಲಿ ದೇವತಾ ಕಾರ್ಯಗಳನ್ನು ಮಾಡುವ ಮೂಲಕ ಸರ್ವರೂ ಶಾಂತಿ, ನೆಮ್ಮದಿ, ಸುಖದಿಂದ ಸಾಮರಸ್ಯದ ಬದುಕನ್ನು ನಡೆಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಅವರು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿಯ ನಿಜಗನಹಳ್ಳಿ ಗ್ರಾಮದಲ್ಲಿ ಶ್ರೀ ಗಣಪತಿ ದೇವಸ್ಥಾನ ವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ದೇವಾಲಯಗಳನ್ನು ನಿರ್ಮಿಸುವುದು ಎಷ್ಟು ಮುಖ್ಯವೋ ಅಲ್ಲಿ ನಿತ್ಯ ಪೂಜಾ ಕಾರ್ಯಗಳನ್ನು ಮಾಡುವುದು ಅದಕ್ಕಿಂತ ಮುಖ್ಯವಾದುದು ಆ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕು ಎಂದರು.
ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಯನ್ನು ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಸರ್ವರೂ ನನಗೆ ಆಶೀರ್ವಾದ ಮಾಡಿದ್ದರಿಂದ ಇಂದು ನಾನು ಶಾಸಕನಾಗಿದ್ದು ಅದರ ಜವಾಬ್ದಾರಿಯನ್ನು ಅರಿತು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನತೆಯ ಋಣವನ್ನು ಪ್ರಾಮಾಣಿಕವಾಗಿ ತೀರಿಸುತ್ತೇನೆ ಎಂದರು.
ಗ್ರಾಮದ ಪರಿಮಿತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಈ ಭಾಗದ ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ
ಡಿ.ರವಿಶಂಕರ್ ಅವರನ್ನು ಗ್ರಾಮಸ್ಥರುಗಳು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ತಾ.ಪಂ. ಮಾಜಿ ಸದಸ್ಯ ಚಿಕ್ಕೇಗೌಡ, ಗ್ರಾ.ಪಂ. ಅಧ್ಯಕ್ಷ ಮಾದೇಗೌಡ, ಮಾಜಿ ಅಧ್ಯಕ್ಷ ಬಸವರಾಜ್, ಉಪಾಧ್ಯಕ್ಷೆ ಸುಧಾಶಂಕರಪ್ಪ, ಸದಸ್ಯರಾದ ಪುನೀತ್, ರಮೇಶ್, ಮಾದಪ್ಪ, ಪಿಡಿಓ ರಾಜೇಶ್, ಮುಖಂಡರುಗಳಾದ ವೆಂಕಟೇಶ್, ಸ್ವಾಮಿಶೆಟ್ಟಿ, ಎನ್.ವಿ.ಮಂಜು, ಪಾಟೀಲ್, ಮಹದೇವಶೆಟ್ಟಿ, ಗೋವಿಂದಶೆಟ್ಟಿ, ಎನ್.ಆರ್.ಮಂಜು, ಮಧುಅರಸ್, ಎನ್.ಕೆ.ಕೃಷ್ಣ, ಸಿದ್ದರಾಜು, ಎಂ.ಸಿ.ರಾಮಯ್ಯ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.