September 4, 2026
IMG-20260904-WA0662


ವರದಿ:ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ತಾಲ್ಲೂಕಿನ ನಾಲ್ಕು ಹೋಬಳಿಗಳ ವ್ಯಾಪ್ತಿಯಲ್ಲಿ ಒಟ್ಟು ₹೨೦.೧೬ ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿದ್ಯುತ್ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಾಸಕ ಬಿ.ಜಿ. ಗೋವಿಂದಪ್ಪ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ಸಂಪರ್ಕ ಹಾಗೂ ಪೂರೈಕೆಗೆ ಸಂಬAಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಕ್ರಮ-ಸಕ್ರಮ ಯೋಜನೆಯಡಿ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಹಳೆಯ ವಿದ್ಯುತ್ ಪರಿವರ್ತಕಗಳು ಹಾಗೂ ವಿದ್ಯುತ್ ಕಂಬಗಳನ್ನು ದುರಸ್ತಿ ಮಾಡುವ ಕಾರ್ಯವೂ ನಡೆಯುತ್ತಿದೆ ಎಂದು ಹೇಳಿದರು.
ವಿದ್ಯುತ್ ಇಲಾಖೆಯ ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರಿಗೆ ತೊಂದರೆಯಾಗದAತೆ ಕ್ರಮ ಕೈಗೊಳ್ಳಬೇಕು. ರೈತರು ಹಾಗೂ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ಮೂಲಕ ಹೊಸದುರ್ಗ ತಾಲ್ಲೂಕನ್ನು ವಿದ್ಯುತ್ ಸಮಸ್ಯೆ ಮುಕ್ತ ತಾಲ್ಲೂಕನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ಈ ವೇಳೆ ಶ್ರೀರಾಂಪುರ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ–ಸಕ್ರಮ ಯೋಜನೆಯಡಿ ನೋಂದಾಯಿತ ನೀರಾವರಿ ಕೊಳವೆಬಾವಿಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗೆ ₹೧೩.೦೫ ಕೋಟಿ. ಮತ್ತೋಡು ಹೋಬಳಿ ಗ್ರಾಮಗಳಲ್ಲಿ ಸೇವಾ ಮಾರ್ಗ ದೂರವಿರುವ ವಿದ್ಯುತ್ ಗ್ರಾಹಕರಿಗೆ ಎಲ್.ಟಿ. ಮಾರ್ಗ ವಿಸ್ತರಿಸುವ ಕಾಮಗಾರಿಗೆ ₹೪.೫೪ ಕೋಟಿ ವೆಚ್ಚ, ಕಸಬಾ ಹೋ ಎಲ್.ಟಿ. ಮಾರ್ಗ ವಿಸ್ತರಿಸುವ ಕಾಮಗಾರಿಗೆ ₹೮೯ ಲಕ್ಷ, ವಿದ್ಯುತ್ ಸಮಸ್ಯೆ ನಿವಾರಣೆ ಹಾಗೂ ಮೂಲಸೌಕರ್ಯ ಬಲಪಡಿಸುವ ಉದ್ದೇಶದಿಂದ ₹೧.೬೮ ಕೋಟಿ ವೆಚ್ಚದ ಕಾಮಗಾರಿಗೂ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿದ್ಯುತ್ ಇಲಾಖೆಯ ಅಧಿಕಾರಿಗಳು, ಎಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading