ವರದಿ:ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ಹೊಸದುರ್ಗ–ಹಿರಿಯೂರು ನಡುವೆ ಗ್ರಾಮಾಂತರ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಹೊಸದುರ್ಗ–ಹಿರಿಯೂರು ನಡುವೆ ಎರಡು ಗ್ರಾಮಾಂತರ ಸಾರಿಗೆ ವ್ಯವಸ್ಥೆಗೆ ಶುಕ್ರವಾರ ಶಾಸಕ ಬಿ.ಜಿ.ಗೋವಿಂದಪ್ಪ ಹಸಿರು ನಿಶಾನೆ ತೋರಿಸುವುದರ ಮೂಲಕ ಬಸ್ ಚಾಲನೆಗೆ ಗ್ರೀನ್ ಸಿಗ್ನಲ್ ತೋರಿಸಿದರು.
ನಂತರ ಮಾತನಾಡಿದ ಅವರು ಹೊಸದುರ್ಗ ಮತ್ತು ಹಿರಿಯೂರು ನಡುವೆ ಹೊಸದಾಗಿ ೧೪ ಗ್ರಾಮಾಂತರ ಟ್ರಿಪ್‌ಗಳನ್ನು ಆರಂಭಿಸಲಾಗಿದ್ದು, ಮೈನ್‌ರೋಡ್‌ನಲ್ಲಿರುವ ಎಲ್ಲ ಹಳ್ಳಿಗಳಲ್ಲೂ ಬಸ್ ನಿಲುಗಡೆ ನೀಡಲಾಗುವುದು. ಇದರಿಂದ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಹಿರಿಯೂರಿನಿಂದ ಹೊಸದುರ್ಗ ಮಾರ್ಗವಾಗಿ ರಾತ್ರಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಸಂಜೆ ೬.೩೦ ಮತ್ತು ೭ ಗಂಟೆ ಸುಮಾರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪಾಲಿಟೆಕ್ನಿಕ್, ಡಿಪ್ಲೋಮಾ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳ ಸಂಚಾರದ ಸಮಸ್ಯೆ ಪರಿಹರಿಸಲು ಬೆಳಿಗ್ಗೆ ಎರಡು ಟ್ರಿಪ್, ಮಧ್ಯಾಹ್ನ ಒಂದು ಟ್ರಿಪ್ ಹಾಗೂ ಸಂಜೆ ೪.೩೦ಕ್ಕೆ ಎರಡು ಹೆಚ್ಚುವರಿ ಟ್ರಿಪ್‌ಗಳನ್ನು ೨–೩ ದಿನಗಳೊಳಗಾಗಿ ಒದಗಿಸಲಾಗುವುದು ಎಂದು ತಿಳಿಸಿದರು.
ಇನ್ನು ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಹಿನ್ನೆಲೆಯಲ್ಲಿ ಬಸ್ ಪಾಸ್ ಅವಧಿಯನ್ನು ಈಗಾಗಲೇ ಎರಡು ತಿಂಗಳು ವಿಸ್ತರಿಸಲಾಗಿದೆ. ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರುವ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಕುರಿತು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಹಾಗೂ ಶಾಸಕರು, ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಈ ವಾರದೊಳಗಾಗಿ ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವ ಕುರಿತು ಚರ್ಚೆಯಲ್ಲಿ ಒತ್ತು ನೀಡಲಾಗಿದೆ ಎಂದರು.
ಈ ಸಂಧರ್ಬದಲ್ಲಿ ಕೆ.ಎಸ್.ಆರ್.ಟಿ.ಸಿ ಡಿಪೋ ವ್ಯವಸ್ಧಾಪಕರು, ಕಾಂಗ್ರೇಸ್ ಮುಖಂಡರುಗಳು, ಕಾರ್ಯಕರ್ತರು ಉಪಸ್ಧಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.