December 15, 2025
IMG-20251104-WA0216.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಅವರು ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಈಗಾಗಲೇ ಹಲವೆಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದರು.

ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಪತ್ರಗಳನ್ನು ಸ್ವೀಕರಿಸಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಕಲ್ಪಿಸಿ ಮತ್ತಷ್ಟು ಸಮಸ್ಯೆಗಳ ಮನವಿ ಪತ್ರಗಳನ್ನು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೀಡಿ ಕೂಡಲೇ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು
ಕುಡಿಯುವ ನೀರು, ರಸ್ತೆ, ಚರಂಡಿ, ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನಗಳ ಅಭಿವೃದ್ಧಿ, ಶಾಲಾ ಆವರಣ ಸಮತಟ್ಟು, ಬೋರ್ ವೆಲ್ ಗಳಿಗೆ ಮೋಟಾರ್ ಅಳವಡಿಸುವ ಬಗ್ಗೆ, ಚೆಸ್ಕಾಂಗಳಿಗೆ ಸಂಬಂಧಿಸಿದ ಹಲವು ಸಮಸ್ಯೆ, ಕೆಲವರಿಗೆ ಮಾಸಾಸನ ವ್ಯತ್ಯಾಸ ಆಗಿರುವ ಬಗ್ಗೆ, ಮನೆ ಇಲ್ಲದವರು ಮನೆಯನ್ನು ಮಂಜೂರು ಮಾಡಿಕೊಡಬೇಕೆಂಬ ಮನವಿ, ಮನೆ ನಿರ್ಮಿಸಲು ನಿವೇಶನ ಇಲ್ಲದವರು ನಿವೇಶನ ನೀಡಬೇಕೆಂಬ ಮನವಿ, ನೀರಾವರಿ ಇಲಾಖೆಗೆ ಸೇರಿದ ಸಮಸ್ಯೆಗಳು ಸೇರಿದಂತೆ ನೂರಾರು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರಿಗೆ ಮನವಿ ಸಲ್ಲಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರುಗಳು, ಸಾರ್ವಜನಿಕರು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading