
ವರದಿ: ಕೆ.ಟಿ.ಮೋಹನ್ ಕುಮಾರ್
ಹಾಸನದಲ್ಲಿ ಡಿಸೆಂಬರ್ 5ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಜನಕಲ್ಯಾಣ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳವರು, ಮಹಿಳೆಯರು, ಯುವ ಸಮೂಹ, ಕಾರ್ಯಕರ್ತರುಗಳು, ಅಭಿಮಾನಿಗಳು, ಸ್ವಾಭಿಮಾನಿ ಸಂಘಟನೆಗಳವರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿ ಮಾಡಬೇಕೆಂದು ಮೈಸೂರು ಜಿಲ್ಲೆಯ ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ಹಾಗೂ ಉಪಮುಖ್ಯಮಂತ್ರಿಯಾದ
ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉತ್ತಮ ಆಡಳಿತವನ್ನು ನೀಡುತ್ತಾ ಬರುತ್ತಿದ್ದು ಸರ್ಕಾರಕ್ಕೆ ರಾಜ್ಯದ ಜನತೆಯ ಆಶೀರ್ವಾದವಿದೆ ಎಂದರು.
ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗೂ ಉಪಮುಖ್ಯಮಂತ್ರಿಯಾದ
ಡಿ.ಕೆ.ಶಿವಕುಮಾರ್ ಅವರುಗಳ ಕೈ ಬಲಪಡಿಸುವ ಹಾಗೂ ಪಕ್ಷದ ಸಂಘಟನೆಗಾಗಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ನೋಡಿ ಸಹಿಸಲಾಗದ ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಹಾಗೂ ನಮ್ಮ ಪಕ್ಷದ ನಾಯಕರುಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸಮಾವೇಶದಲ್ಲಿ ನಮ್ಮ ಪಕ್ಷದ ನಾಯಕರುಗಳು ತಕ್ಕ ಉತ್ತರ ನೀಡಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.