
ಚಳ್ಳಕೆರೆ ಡಿ.4
ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವತಿಯಿಂದ ತಾಲೂಕಿನ ನೊಂದಾಯಿತ170 ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಹಾಗೂ ಇತರೆ ಸಾಮಾಗ್ರಿಗಳನ್ನು ಶಾಸಕ ಟಿ.ರಘುಮೂರ್ತಿ ವಿತರಿಸಿದರು.
ನಗತದ ತಾಲೂಲು ಪಂಚಾಯತ್ ಕಚೇರಿ ಆವರಣ ಶಾಸಕರ ಭವನದಲ್ಲಿ ವಿತರಿಸಿದರು.
ನಂತರ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದ್ದು, ಈ ನಿಟ್ಟಿನಲ್ಲಿ ವೆಲ್ಡಿಂಗ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಸರ್ಕಾರ ಇಂತಹ ಸವಲತ್ತುಗಳನ್ನು ಕಾರ್ಮಿಕರಿಗೆ ಉಚಿತವಾಗಿ ಒದಗಿಸುತ್ತಿದ್ದು ಇಂತಹ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವ ಮೂಲಕ ತಮ್ಮ ವೃತ್ತಿಯಲ್ಲಿ ಮುಂದುವರಿಯಬೇಕೆಂದು ಕಿವಿಮಾತು ಹೇಳಿದರು.
ನಗರಸಭೆ ಅಧ್ಯಕ್ಷೆ ಜಯತುನ್ ಬಿ.
ಕಾರ್ಮಿಕ ನಿರೀಕ್ಷಕಿ ಕುಸುಮ ಇತರರಿದ್ದರು
About The Author
Discover more from JANADHWANI NEWS
Subscribe to get the latest posts sent to your email.