December 14, 2025
1764852943385.jpg

ಚಿತ್ರದುರ್ಗಡಿ.04:
ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ತಂಬಾಕು ಮುಕ್ತ ಯುವ ಅಭಿಯಾನ 3.0 ಅಂಗವಾಗಿ ಕಳೆದ ಅಕ್ಟೋಬರ್ 10 ರಿಂದ ನವೆಂಬರ್ 30 ರವರೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತನಿಖಾ ತಂಡವು ನಗರ ಪ್ರದೇಶಗಳಲ್ಲಿ ಮತ್ತು ವಿವಿಧ ಗ್ರಾಮಗಳಲ್ಲಿ ಯುವಕರಿಗೆ ಮತ್ತು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, 224 ಪ್ರಕರಣ ದಾಖಲಿಸಿ, ರೂ.28,100 ದಂಡ ವಿಧಿಸಿದೆ.

ಯುವ ಜನತೆ ತಂಬಾಕಿನ ದುಶ್ಚಟಗಳಿಗೆ ಒಳಗಾಗುವುದನ್ನು ತಪ್ಪಿಸಲು ಹಾಗೂ ತಂಬಾಕು ಸೇವನೆಯಿಂದ ಉಂಟಾಗುತ್ತಿರುವ ದುಷ್ಪಾರಿಣಾಮದ ಜಾಗೃತಿ ಮೂಡಿಸಲಾಗುತ್ತಿದೆ. ಅಂಗಡಿ ಮಾಲೀಕರು, ಯುವಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಗಿದೆ.
ಕಳೆದ ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಅಂಗಡಿಗಳ ಮಾಲೀಕರಿಗೆ ಜಾಗೃತಿ ಮೂಡಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 155 ಕೇಸುಗಳನ್ನು ದಾಖಲಿಸಿ ರೂ. 17,950 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 50 ಕೇಸುಗಳನ್ನು ದಾಖಲಿಸಿ ರೂ. 6,200 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 19 ಕೇಸುಗಳನ್ನು ದಾಖಲಿಸಿ ರೂ. 3,950 ದಂಡವನ್ನು ಸೇರಿ, ಒಟ್ಟು 224 ಕೇಸುಗಳನ್ನು ದಾಖಲಿಸಿ ರೂ. 28100 ದಂಡವನ್ನು ವಸೂಲಿ ಮಾಡಲಾಗಿದೆ.
ತಂಬಾಕು ಮುಕ್ತ ಯುವ ಅಭಿಯಾನ 3.0 ಅಂಗವಾಗಿ 15 ತಂಬಾಕು ಕಾರ್ಯಾಚರಣೆ, 35 ವಿವಿಧ ಗ್ರಾಮಗಳಲ್ಲಿ ಐಇಸಿ ಕಾರ್ಯಕ್ರಮ, 8 ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳಿಗೆ ತರಬೇತಿ, 1 ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ, 1 ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. 40 ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ 2 ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಭಿಯಾನದಲ್ಲಿ ಆರೋಗ್ಯ, ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್, ಅಬಕಾರಿ ಇಲಾಖೆಗಳು ಸೇರಿದಂತೆ ನಗರಸಭೆ ಹಾಗೂ ಪುರಸಭೆ ಸೂಕ್ತ ಸಹಕಾರ ನೀಡಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading