ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಮಿಥಿಲಾ ವಿದ್ಯಾಸಂಸ್ಥೆಯ 2024-25ನೇ ಸಾಲಿನ ಶಾಲಾ ವಾರ್ಷಿಕೋತ್ಸವವು ಅದ್ದೂರಿಯಾಗಿ ನೆರವೇರಿತು.


ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಪ್ಪ ಅವರು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಾಲಾ ವಾರ್ಷಿಕೋತ್ಸವಗಳು ಶಾಲೆಯ ಸಾಂಸ್ಕೃತಿಕ ವೈಭವವಾಗಿವೆ ಎಂದರು. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯ ಅನಾವರಣಗೊಳ್ಳಲು ಶಾಲಾ ವಾರ್ಷಿಕೋತ್ಸವವು ಉತ್ತಮ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪೋಷಕರುಗಳು ಹೆಚ್ಚು ಹೆಚ್ಚು ಪಾಲ್ಗೊಂಡು ಮಕ್ಕಳ ಕಲಾ ವೈಭವಕ್ಕೆ ಪ್ರೋತ್ಸಾಹಿಸಬೇಕು ಎಂದರು.
ವರ್ಷಕ್ಕೊಮ್ಮೆ ನಡೆಯುವ ಶಾಲಾ ವಾರ್ಷಿಕೋತ್ಸವದಲ್ಲಿ ತಮ್ಮ ಮಕ್ಕಳ ಕಲಿಕೆ ಬಗ್ಗೆ, ಕಲೆಯ ಬಗ್ಗೆ, ಆಟೋಟಗಳ ಬಗ್ಗೆ ತಿಳಿಯುವ ಹಾಗೂ ನೋಡುವ ಕಾತುರತೆ ಪೋಷಕರಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಎಂದರು.
ಪೋಷಕರು ಮಕ್ಕಳಿಗೆ ಹೆಚ್ಚು ಮೊಬೈಲ್ ಬಳಕೆ ಮಾಡುವುದನ್ನು ತಡೆಗಟ್ಟಿ ಅವರುಗಳಿಗೆ ಓದುವ, ಆಟವಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು, ವಿವಿಧ ಕಲಾ ಪ್ರತಿಭೆಗಳಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಲೈನ್ ಮ್ಯಾನ್ ಜಗದೀಶ್, ಶಾಲಾ ವಾಹನದ ಚಾಲಕ ಪ್ರೇಮ್ ಅವರುಗಳನ್ನು ಸನ್ಮಾನಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಕೆ.ಜಯರಾಮ್, ಉಪಾಧ್ಯಕ್ಷ ಎಂ.ವಿ.ವೆಂಕಟೇಶ್, ಗೌರವ ಕಾರ್ಯದರ್ಶಿ ಎಂ.ಬಿ.ಲೋಕನಾಥ್, ನಿರ್ದೇಶಕ ನಟಶೇಖರಾಚಾರ್,
ಎಂ.ಎಸ್.ಕೋಟೆಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಕೆ.ನಟರಾಜು, ಶಿಕ್ಷಣ ಸಂಯೋಜಕ ಜನಾರ್ಧನ್, ದಾಸಪ್ಪ, ನಿವೃತ್ತ ಮುಖ್ಯ ಶಿಕ್ಷಕ ಬೋರೇಗೌಡ, ಮುಖ್ಯ ಶಿಕ್ಷಕರಾದ ಅರ್ಪಿತ, ಅಭಿಲಾಷ್, ಮಂಜುನಾಥ್, ಸಿಮಾ, ವಿದ್ಯಾರ್ಥಿಗಳು, ಶಿಕ್ಷಕರುಗಳು, ಪೋಷಕರು ಸೇರಿದಂತೆ ಹಲವರು ಭಾಗವಹಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.