January 30, 2026
IMG-20250305-WA0103.jpg

ಚಳ್ಳಕೆರೆ: ದೇಶದಲ್ಲಿ ದಿನದಿಂದ ದಿನಕ್ಕೆ ವಾತಾವರಣಕ್ಕೆ ತಕ್ಕಂತೆ ಹವಾಮಾನ ವೈಪರಿತ್ಯದಿಂದಾಗಿ ಸಾರ್ವಜನಿಕರಿಗೆ ಮಲೇರಿಯಾ ಡೆಂಗ್ಯೂ ಚಿಕನ್ ಗುನ್ಯಾದಂತಹ ಮಾರಣಾಂತಿಕ ರೋಗಗಳು ಕಂಡುಬರುತ್ತಿದ್ದು ಸಾರ್ವಜನಿಕರು ಜಾಗೃತಿ ವಹಿಸಲು ಆಶಾ ಕಾರ್ಯಕರ್ತರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶಿ ತಿಳಿಸಿದರು. 

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಹವಾಮಾನ ವೈಪರಿತ್ಯ ಹಾಗೂ ಮಾನವ ಆರೋಗ್ಯ ಕುರಿತ ಆಶಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತ ದೇಶ ಜನಸಂಖ್ಯೆಯಲ್ಲಿ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ ದೇಶದ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಹವಾಮಾನ ಪ್ರತಿದಿನ ಬದಲಾವಣೆ ಕಾಣುತ್ತಿದೆ. ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು ನಮ್ಮ ತಾಲೂಕು 40 ಡಿಗ್ರಿಗೂ ಹೆಚ್ಚಿನ ಉಷ್ಣತೆಯ ಹವಾಮಾನವನ್ನು ಹೊಂದಿರುತ್ತದೆ ಇದರಿಂದಾಗಿ ವಯೋ ವೃದ್ಧರು ಮಕ್ಕಳು ರೋಗಿಗಳು ಬಿಸಿಲಿನ ತಾಪ ತಾಳಲಾರದೆ ಆಸ್ಪತ್ರೆಗಳಿಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ ಇಂತಹ ಹವಮಾನ ವೈಪರಿತ್ಯಗಳನ್ನು ತಡೆಗಟ್ಟಲು ಸಾಧ್ಯವಿಲ್ಲ ಆದರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬಹುದಾಗಿದ್ದು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಆಶಾ ಕಾರ್ಯಕರ್ತರ ಜವಾಬ್ದಾರಿಯಾಗಿರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸಬೇಕು ಹವಾಮಾನದ ಬದಲಾವಣೆಯ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಮಂಜಾಗ್ರತೆಯ ಬಗ್ಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಎಲ್ಲಾ ಆಶಾ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಕಾರ್ಯಾನ್ಮುಖರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿಗಳಾದ ಸುರೇಶ್ ಬಾಬು ಜಿಲ್ಲಾ ಮೇಲ್ವಿಚಾರಕರಾದ ಮಲ್ಲಿಕಾರ್ಜುನ್, ಲೋಕೇಶ್ ನಾಯ್ಡು, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಾಜು ಬಿ ಎಚ್ , ಅಮೃತ್ ರಾಜ್  ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading