ಕಾರ್ಮಿಕರ ದಿನಾಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಹೊಡೆಯುವ ಕ್ವಾರಿ ಕಾರ್ಮಿಕರ ಸಂಘಟನೆಯ ವತಿಯಿಂದ ಕಾರ್ಮಿಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.



ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರು ಹಾಗೂ ಬಡಗಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿರುವ ಉಸ್ಮಾನ್ ಅಲಿ ಅವರ ಪುತ್ರ ರೋಷನ್ ಅವರು ದ್ವಿತೀಯ ಪಿಯುಸಿಯಲ್ಲಿ ವಾಸವಿ ಪಿಯು ಕಾಲೇಜು, ಚಳ್ಳಕೆರೆ ವಾಣಿಜ್ಯ ವಿಭಾಗದಲ್ಲಿ 589 ಅಂಕಗಳು (94.24%) ಪಡೆದು ತಾಲೂಕು ಟಾಪರ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.
ಅದೇ ರೀತಿ, ಗಾರೆ ಕೆಲಸದ ವೃತ್ತಿ ಮಾಡುತ್ತಿರುವ ಟಿ.ಒ. ಮಂಜಣ್ಣ ಅವರ ಪುತ್ರ ಎಂ. ಅಭಿಷೇಕ್ ಅವರು ಶ್ರೀಮತಿ ಗೌರಮ್ಮ ತಿಪ್ಪೇಸ್ವಾಮಿ ಸರ್ಕಾರಿ ಪ್ರೌಢಶಾಲೆ, ತಳಕು ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ 558 ಅಂಕಗಳು (89.26%) ಗಳಿಸಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಗೌರವಿಸಲಾಯಿತು.
ಇನ್ನೂ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಅಲೆಮಾರಿ ಕುಟುಂಬದ ತಿಪ್ಪೇಸ್ವಾಮಿ ಅವರ ಪುತ್ರಿ ಟಿ. ನೇತ್ರಾವತಿ ಅವರು ಶ್ರೀಮತಿ ಗೌರಮ್ಮ ತಿಪ್ಪೇಸ್ವಾಮಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 561 ಅಂಕಗಳು (89.76%) ಪಡೆದು ಕಾಲೇಜು ಟಾಪರ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕರು, ತಳಕು ಗ್ರಾಮ ಪಂಚಾಯಿತಿ ಪಿಡಿಒ ರಜನಿಕಾಂತ್, ಪರಶುರಾಂಪುರ ಕಾರ್ಮಿಕ ಸಂಘದ ಈರಣ್ಣ ಹಾಗೂ ಚಳ್ಳಕೆರೆ ಕಾರ್ಮಿಕ ಸಂಘದ ಪ್ರಸನ್ನ ಅವರನ್ನು ಸಹ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ತಳಕು ಗ್ರಾಮ ಪಂಚಾಯಿತಿ ಪಿಡಿಒ ರಜನಿಕಾಂತ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಎ. ವೆಂಕಟೇಶ್, ಉಪಾಧ್ಯಕ್ಷ ಉಸ್ಮಾನ್ ಅಲಿ, ಪ್ರಧಾನ ಕಾರ್ಯದರ್ಶಿ ಟಿ. ನಾಗರಾಜ್ ಬಂಗಾರಿ, ಸಂಘಟನಾ ಕಾರ್ಯದರ್ಶಿ ರಂಗಸ್ವಾಮಿ ಸೇರಿದಂತೆ ಸಂಘಟನೆಯ ಸರ್ವ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
About The Author
Discover more from JANADHWANI NEWS
Subscribe to get the latest posts sent to your email.