ಚಿತ್ರದುರ್ಗ ಮೇ 05:
ಅಂತರ ರಾಷ್ಟ್ರೀಯ ಅಗ್ನಿಶಾಮಕ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಮಂಗಳವಾರ ‘ಟ್ರಯೇಜ್ ಮಾಕ್ ಡ್ರಿಲ್’ (Triage Mock Drill) ಅಗ್ನಿ ಅವಘಡ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ ನಡೆಯಿತು.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕದ ಸಂಯುಕ್ತಾಶ್ರಯದಲ್ಲಿ ಅಗ್ನಿ ಅವಘಡಗಳಂತಹ ತುರ್ತು ಸಂದರ್ಭಗಳಲ್ಲಿ ವಿಪತ್ತು ನಿರ್ವಹಣಾ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ. ಅಗಡಿ, ಅಗ್ನಿಶಾಮಕ ಠಾಣಾಧಿಕಾರಿ ನರೇಂದ್ರ ಹಾಗೂ ಸಿಬ್ಬಂದಿವರ್ಗದವರು ರಕ್ಷಣಾ ಕಾರ್ಯಾಚರಣೆಯ ವಿವಿಧ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಗಾಯಾಳುಗಳಿಗೆ ನೀಡಬೇಕಾದ ತುರ್ತು ಚಿಕಿತ್ಸೆ ಹಾಗೂ ‘ಟ್ರಯೇಜ್’ ವಿಧಾನದ ಕುರಿತು ಮಾಹಿತಿ ನೀಡಿದರು. ರೆಡ್ ಕ್ರಾಸ್ ಮತ್ತು ಎನ್.ಎಸ್.ಎಸ್. ಸ್ವಯಂಸೇವಕರು ಅಣಕು ಪ್ರದರ್ಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಮಜಹರ್ ಉಲ್ಲಾ, ಜಂಟಿ ಕಾರ್ಯದರ್ಶಿಗಳಾದ ಯು. ಸಿ. ಗಿರೀಶ್, ಡಾ. ಸಂತೋಷ್ ಉಜ್ಜನಪ್ಪ, ಭರತ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ತಾರಿಣಿ ಶುಭದಾಯಿನಿ, ಎನ್.ಎಸ್.ಎಸ್. ಅಧಿಕಾರಿ ಡಾ. ಪ್ರಸಾದ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.