
” ಚಳ್ಳಕೆರೆ-ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಪುಸ್ತಕಗಳ ಅಧ್ಯಯನ ಬಹಳ ಸಹಾಯ ಮಾಡುತ್ತದೆ ಎಂದು ಚಳ್ಳಕೆರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಶ್ರೀ ಗದ್ದಿಗೆ ತಿಪ್ಪೇಸ್ವಾಮಿ ತಿಳಿಸಿದರು.
ತಾಲೂಕಿನ ಸಿದ್ದಾಪುರ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಗ್ರಂಥಾಲಯಕ್ಕೆ ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಅವರು ನೀಡಿದ ಹಲವಾರು ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ಸ್ವೀಕರಿಸಿ ಅವರು ಮಾತನಾಡಿದರು. ಗ್ರಾಮದ ಮುಖಂಡ ಇಂಜಿನಿಯರ್ ತಿಪ್ಪೇರುದ್ರಪ್ಪ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಆದರ್ಶವಾಗಿಟ್ಟುಕೊಂಡು ಸದಾ ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪುಸ್ತಕಗಳ ಅಧ್ಯಯನದಿಂದ ವಿವಿಧ ವಿಷಯಗಳ ಜ್ಞಾನ ಸಿಗುವುದಲ್ಲದೆ ಸಮರ್ಥ ವ್ಯಕ್ತಿತ್ವ ನಿರ್ಮಾಣವಾಗುತ್ತದೆ.ಆದ್ದರಿಂದ ಇದೇ ಗ್ರಾಮದ ಯತೀಶ್ ಎಂ ಸಿದ್ದಾಪುರ ಅವರು ನಮ್ಮೂರಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.



ಯತೀಶ್ ಎಂ ಸಿದ್ದಾಪುರ ಮಾತನಾಡಿ ಗ್ರಾಮದ ಗ್ರಂಥಾಲಯವನ್ನು ಗ್ರಾಮದ ಮಕ್ಕಳು-ಯುವಕರು-ನಾಗರೀಕರು ಸದುಪಯೋಗ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಗಳಮ್ಮ ರಂಗಸ್ವಾಮಿ ವಹಿಸಿ ಮಾತನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಮನುಶ್ರೀ ಸಿದ್ದಾಪುರ ಮಾಡಿದರು.ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ದ್ಯಾಮಲಾಂಭಾ ತಿಪ್ಪೇಸ್ವಾಮಿ, ರೇಣುಕಮ್ಮ ದ್ಯಾಮಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಟಿ.ಗಿರಿಯಪ್ಪ, ರೆಡ್ಡಿಹಳ್ಳಿ ಮಂಜುನಾಥ, ಬಸಲಿಂಗಪ್ಪ , ಮೇಘನಾಥ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.