June 5, 2026
IMG-20260605-WA0215.jpg

ಚಳ್ಳಕೆರೆ, ಜೂನ್ 5: ವಿಜ್ಞಾನ ನಾವೀನ್ಯತೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಬೆಂಗಳೂರು ಇವರ ವತಿಯಿಂದ “ಉದ್ಯಮಶೀಲತೆಯನ್ನು ಉತ್ತೇಜಿಸಲು ನವೋದ್ಯಮ ಪೋಷಣೆ” ವಿಷಯದ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವು ಜೂನ್ 25, 2026ರಂದು ಬೆಳಿಗ್ಗೆ 10:30 ಗಂಟೆಗೆ ಖುದಾಪುರದಲ್ಲಿರುವ ಐಐಎಸ್ಸಿ, ಚಳ್ಳಕೆರೆ ಆವರಣದಲ್ಲಿ ನಡೆಯಲಿದೆ.
ನವೋದ್ಯಮ, ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗ ಅವಕಾಶಗಳ ಕುರಿತು ಯುವಕರು, ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಸಕ್ತ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಗಣೇಶ್ ತೋಳಾರ್ (ಮೊ. 8970582703) ಅವರನ್ನು ಸಂಪರ್ಕಿಸಬಹುದು.
ನೋಂದಣಿಗಾಗಿ ಗೂಗಲ್ ಫಾರಂ ಲಿಂಕ್: https://forms.gle/Cg3jWppeZZ6nnAUS7
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading